ಬೆಂಗಳೂರು: ಸಿರಿಧಾನ್ಯ ಬೆಳೆಯುವ ಹಾಗೂ ಸಣ್ಣ ಪ್ರಮಾಣದ ಜಮೀನು ಹೊಂದಿರುವ ರೈತರಿಗೆ ಸಿಹಿ ಸುದ್ದಿಯನ್ನು ಸರ್ಕಾರ ನೀಡಿದೆ. ಸಿರಿಧಾನ್ಯ ಬೆಳೆಯನ್ನು ಪ್ರೋತ್ಸಾಹಿಸುವ ಸಲುವಾಗಿ ರೈತ ಸಿರಿ ಯೋಜನೆ ಜಾರಿಗೆ ತಂದಿದ್ದು, ಇದರಡಿಯಲ್ಲಿ ಧಾನ್ಯ ಬೆಳೆಯುವುದಕ್ಕೆ ಬೇಕಾಗಿರುವ ಬೀಜಗಳು ಮತ್ತು ರಸಗೊಬ್ಬರ ಪೂರೈಕೆಗಾಗಿ ಸರ್ಕಾರ 10,000 ರೂ. ನೀಡಲಿದೆ. ಈ ಯೋಜನೆಯಡಿ ಸಿರಿಧಾನ್ಯ ಬೆಳೆಗಳ ವಿಸ್ತೀರ್ಣ ಹೆಚ್ಚಿಸಲು ಪ್ರತಿ ಹೆಕ್ಟೇರ್ಗೆ 10,000 ರೂಪಾಯಿ ಅನುದಾನವನ್ನು ರೈತರ ಖಾತೆಗೆ ನೇರ ನಗದು ವರ್ಗಾವಣೆ ಮೂಲಕ ಪಾವತಿಸಲಾಗುತ್ತದೆ.
ರೈತ ಸಿರಿ ಯೋಜನೆಯ ಉದ್ದೇಶಗಳು
- ರಾಜ್ಯದಲ್ಲಿ ಸಿರಿಧಾನ್ಯ ಪ್ರದೇಶ ವಿಸ್ತರಣೆ ಹಾಗೂ ಉತ್ಪಾದನೆ ಹೆಚ್ಚಳ
- ಸಿರಿಧಾನ್ಯಗಳು ಪೌಷ್ಟಿಕ ಆಹಾರ, ರೈತರ ಭದ್ರತೆ, ಸುಸ್ಥಿರಕೃಷಿ ಮತ್ತು ಪರಿಸರದ ಸಂರಕ್ಷಣೆಗೆ ಪೂರಕವಾಗಿರುವ ಹಿನ್ನೆಲೆಯಲ್ಲಿ ಆಸಿರಿಧಾನ್ಯಗಳನ್ನು ಬೆಳೆಯಲು ರೈತರಿಗೆ ಪ್ರೋತ್ಸಾಹಿಸುವುದು
- ಅತಿ ಕಡಿಮೆ ಮಳೆ ಹಾಗೂ ಕಡಿಮೆ ಫಲವತ್ತತೆಯುಳ್ಳ ಜಮೀನಿನ ಸದ್ಬಳಕೆ ಮಾಡುವುದು.
- ಸಿರಿಧಾನ್ಯಗಳ ಉತ್ಪಾದನೆಗೆ ಪೂರಕವಾದ ಸುಧಾರಿತ ತಾಂತ್ರಿಕತೆಗಳನ್ನು ಸೂಕ್ತ ಸಮಯದಲ್ಲಿ ಅಳವಡಿಸಿ ರೈತರ ಆರ್ಥಿಕ ಪರಿಸ್ಥಿತಿ ಸುಧಾರಿಸುವುದು.
ಸಿರಿಧಾನ್ಯ ಬೆಳೆಯುವ ರೈತರಿಗೆ ಸಹಾಯಧನ
- ಸಿರಿಧಾನ್ಯ ಬೆಳೆಯುವ ರೈತರಿಗೆ ಪ್ರತಿ ಹೆಕ್ಟೇರ್ಗೆ 10,000 ರೂಪಾಯಿ ಪ್ರೋತ್ಸಾಹಧನವನ್ನು 2 ಕಂತುಗಳಲ್ಲಿ ನೇರ ನಗದು ವರ್ಗಾವಣೆ ಮೂಲಕ ರೈತರ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುವುದು.
- ಊದಲು ನವಣೆ, ಹಾರಕ, ಸಾಮೆ ಮತ್ತು ಬರಗು ಸಿರಿಧಾನ್ಯಗಳಿಗೆ ಮಾತ್ರ ಒತ್ತು ನೀಡಲಾಗುವುದು.
- ಮೊದಲ ಕಂತಿನ ಪ್ರತ್ಸಾಹಧನ 6000 ರೂಪಾಯಿಯನ್ನು ಸಿರಿಧಾಣ್ಯ ಬಿತ್ತನೆ ಮಾಡಿದ 30 ದಿನಗಳ ನಂತರ ಬೆಳೆಯನ್ನು ಜಿಪಿಎಸ್ ಆಧಾರಿತ ಫೋಟೋ ಪರಿಶೀಲಿಸಿ ರೈತರ ಖಾತಗೆ ಜಮೆ ಮಾಡಲಾಗುತ್ತದೆ.
- 2ನೇ ಕಂತಿನ ಪ್ರೋತ್ಸಾಹಧನ ₹4,000ವನ್ನು ನಂತರದಲ್ಲಿ ಜಮೆ ಮಾಡಲಾಗುವುದು.
- ಪ್ರತಿ ಫಲಾನುಭವಿ ರೈತರಿಗೆ ಗರಿಷ್ಠ 2 ಹೆಕ್ಟೇರ್ಗೆ ಮಾತ್ರ ಸೀಮಿತವಾಗುವಂತೆ ಪ್ರೋತ್ಸಾಹಧನ ನೀಡುವುದು.
- ಈ ಯೋಜನೆಯನ್ನು ‘ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ ಹಾಗೂ ಇನ್ನಿತರೆ ಸಮಾನ ಯೋಜನೆಗಳೊಂದಿಗೆ ಸಂಯೋಜಿಸಿ ಅನುಷ್ಠಾನ ಮಾಡಲಾಗುತ್ತಿದೆ.
ಸಿರಿಧಾನ್ಯಗಳ ಪ್ರಾಮುಖ್ಯತೆ:
ಸಿರಿಧಾನ್ಯಗಳಲ್ಲಿ ಹೆಚ್ಚಿನ ಪ್ರಮಾಣದ ಪ್ರೋಟಿನ್, ನಾರು (ಫೈಬರ್) ಕ್ಯಾಲ್ಶಿಯಂ ಮತ್ತು ಖನಿಜಾಂಶಗಳನ್ನು ಹೊಂದಿದ್ದು ಆಹಾರ ಕ್ರಮದಲ್ಲಿ ಪೌಷ್ಟಿಕಾಂಶದ ಭದ್ರತೆಯನ್ನು ಖಾತರಿಪಡಿಸುತ್ತದೆ. ವಿಶೇಷವಾಗಿ ಈ ಬೆಳಗಳನ್ನು ಶುಷ್ಕ ಒಣ ಪರಿಸ್ಥಿತಿಗಳಲ್ಲಿ, ಕಡಿಮೆ ಫಲವತ್ತತೆ ಇರುವ ಭೂಮಿಗಳಲ್ಲೂ ಬೆಳೆಯಬಹುದು.
ಫಲಾನುಭವಿಗಳ ಅರ್ಹತೆ:
- ಫಲಾನುಭವಿಯು ರೈತರಾಗಿದ್ದು, ಅವರ ಹೆಸರಲ್ಲಿ ಜಮೀನನ್ನು ಹೊಂದಿರಬೇಕು.
- ಜಂಟಿ ಖಾತೆ ಹೊಂದಿದ್ದಲ್ಲಿ, ಇತರೆ ಖಾತೆದಾರರ ಒಪ್ಪಿಗೆ ಪತ್ರ ಪಡೆದಿರಬೇಕು.
- ತಂದೆ ಅಥವಾ ತಾಯಿ ಹೆಸರಲ್ಲಿ ಜಮೀನಿದ್ದು, ಅವರು ಮರಣ ಹೊಂದಿದ್ದಲ್ಲಿ ಮಾತ್ರ ಗ್ರಾಮ ಲೆಕ್ಕಿಗರಿಂದ ದೃಢೀಕರಿಸಿ, ಕುಟುಂಬದ ಇತರೆ ಸದಸ್ಯರಿಂದ ಒಪ್ಪಿಗೆ ಪಡೆದು ಅರ್ಜಿ ಸಲ್ಲಿಸಬೇಕು.
- ಮಹಿಳೆಯ ಹೆಸರಲ್ಲಿ ಖಾತೆ ಹೊಂದಿದ್ದು, ಕುಟುಂಬದ ಇತರೆ ಪುರುಷ ಸದಸ್ಯರ ಹೆಸರಲ್ಲಿ ಅರ್ಜಿ ಸಲ್ಲಿಸಿದ್ದಲ್ಲಿ ಮಾನ್ಯ ಮಾಡಬಾರದು, ಮಹಿಳೆಯ ಹೆಸರಲ್ಲಿಯೇ ಅರ್ಜಿ ಸಲ್ಲಿಸುವುದನ್ನು ಉತ್ತೇಜಿಸಬೇಕು.
- ಫಲಾನುಭವಿ ರೈತರು ಸಿರಿಧಾನ್ಯಗಳಾದ ಊದಲು, ನವಣೆ, ಹಾರಕಾ, ಕೊರಲೆ, ಸಾಮೆ ಮತ್ತು ಬರಗು ಸಿರಿಧಾನ್ಯಗಳನ್ನು ಪ್ರಮುಖ ಬೆಳೆಯಾಗಿ ಬೆಳೆದಿರಬೇಕು.
ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳ ಪಟ್ಟಿ
- ವಸತಿ ಪ್ರಮಾಣಪತ್ರ
- ಆದಾಯ ಪ್ರಮಾಣಪತ್ರ
- ಭೂ ದಾಖಲೆಗಳು
- ವಿಳಾಸ ಪುರಾವೆ
- ಆಧಾರ್ ಕಾರ್ಡ್
- ಬ್ಯಾಂಕ್ ಖಾತೆ ಪಾಸ್ ಬುಕ್