ಹಾವೇರಿ: ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ಘಟನೆ ಪುಣೆ – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 48ರ ತಡಸ ಕ್ರಾಸ್ ಬಳಿ ನಡೆದಿದೆ. ಚಂದ್ರಮ್ಮ(59), ಮೀನಾ(38), ಮಹೇಶ್ಕುಮಾರ್, ಧನ್ವೀರ್ ಮೃತರಾಗಿದ್ದು, ತಡಸ ಕ್ರಾಸ್ ಬಳಿ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು,
ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ 20 ಲಕ್ಷ ರೂವರೆಗೂ ಸಾಲ! ಕೇಂದ್ರ ಸರ್ಕಾರದ ಈ ಯೋಜನೆಯಿಂದ ಸಿಗುತ್ತೆ ಭರ್ಜರಿ ಲಾಭ!
ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದರೆ, ಇನ್ನಿಬ್ಬರು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. KA 05, NC 4963 ನಂಬರಿನ ಟಾಟಾ ಅಲ್ಟ್ರೋಸ್ ಕಾರಿನಲ್ಲಿದ್ದ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.