ದಿಸ್ಪುರ್: ಬಸ್ ಹಾಗೂ ಟ್ರಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ (Accident) 12 ಮಂದಿ ಸಾವಿಗೀಡಾದ ಘಟನೆ ಅಸ್ಸಾಂನ (Assam) ಗೋಲಾಘಾಟ್ನಲ್ಲಿ ನಡೆದಿದೆ. ಘಟನೆಯಲ್ಲಿ 25 ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಇಂದು (ಬುಧವಾರ) ಮುಂಜಾನೆ 5 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಬಸ್ ತಿಲಿಂಗ ಮಂದಿರದ ಕಡೆಗೆ ಹೊರಟಿತ್ತು. ಈ ವೇಳೆ ಬಲಿಜನ್ ಪ್ರದೇಶದ ಬಳಿ ಬಸ್ ಟ್ರಕ್ಗೆ ಡಿಕ್ಕಿಯಾಗಿದೆ. ಪರಿಣಾಮ ಸ್ಥಳದಲ್ಲೇ 12 ಮಂದಿ ಸಾವಿಗೀಡಾಗಿದ್ದಾರೆ.
Side Effects of Earphone: ಫುಲ್ ಟೈಂ ಇಯರ್ ಫೋನ್ ಬಳಸ್ತೀರಾ..? ಆರೋಗ್ಯ ಸಮಸ್ಯೆ ಒಂದೆರಡಲ್ಲ
ಘಟನೆಯ ಬಳಿಕ ಸ್ಥಳೀಯರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ನೆರವಾಗಿದ್ದಾರೆ. ಅಪಘಾತದಲ್ಲಿ ಗಾಯಗೊಂಡವರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ಪೊಲೀಸರು (Police ) ತಿಳಿಸಿದ್ದಾರೆ.