ಚಿಕ್ಕಬಳ್ಳಾಪುರ: KSRTC ಬಸ್ ಹಾಗೂ ಮಿನಿ ಬಸ್ ನಡುವೆ ಭೀಕರ ಅಪಘಾತ (Road accident) ಸಂಭವಿಸಿದ್ದು, ಓರ್ವ ಸ್ಥಳದಲ್ಲೇ ಸಾವು ಮೂವರ ಸ್ಥಿತಿ ಗಂಭೀರ 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯವಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕು ಚಿನ್ನಸಂದ್ರ ಗೇಟ್ ಬಳಿ ಘಟನೆ ನಡೆದಿದೆ. ಮಿನಿ ಬಸ್ನಲ್ಲಿದ್ದ ಒಬ್ಬ ಮೃತಪಟ್ಟಿದ್ದು, ಮೂವರ ಸ್ಥಿತಿ ಚಿಂತಾಜನಕವಾಗಿದೆ.
ಮಂಡಿ ನೋವು, ಸಂದಿ ನೋವುಗಳಿಂದ ಜೀವನದಲ್ಲಿ ಬೇಸತ್ತಿದ್ದರೆ ಇದೊಂದು ಚಿಕಿತ್ಸೆ ಪ್ರಯತ್ನ ಮಾಡಿ: ಉಚಿತ ಸಲಹೆ
ಗಾಯಾಳುಗಳನ್ನು ಚಿಂತಾಮಣಿಯ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಅಪಘಾತದ ರಭಸಕ್ಕೆ ಮಿನಿ ಬಸ್ ನಜ್ಜುಗುಜ್ಜಾಗಿ ಛಿದ್ರ ಛಿದ್ರವಾಗಿದೆ. ಕೈವಾರ ಮೂಲದ ಇಲ್ಲು (40) ಮೃತ ವ್ಯಕ್ತಿ. ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಅಪಘಾತದಿಂದಾಗಿ ಚಿಂತಾಮಣಿ – ಬೆಂಗಳೂರು ಮಾರ್ಗದಲ್ಲಿ ಟ್ರಾಫಿಕ್ ಜಾಮ್ ಉಂಟಾಯಿತು.