ಯಾದಗಿರಿ: ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದು, ಓರ್ವನ ಸ್ಥಿತಿ ಚಿಂತಾಜನಕವಾಗಿರುವ ಘಟನೆ ಯಾದಗಿರಿ ತಾಲೂಕಿನ ಕಿಲ್ಲನಕೇರಾ ಬಳಿ ನಡೆದಿದೆ. ವನಜಾಪ್ರಸಾದ್ (30) ನಾಗರಾಜ (35) ಮೃತ ದುರ್ದೈವಿಗಳಾಗಿದ್ದು,
ಸೈದಾಪುರ ಬಳಿಯ ಪ್ರಣತಿ ಎಲೆಕ್ಟ್ರಾನಿಕ್ಸ್ ನಲ್ಲಿ ಕೆಲಸ ಮಾಡ್ತಿದ್ದ ಹೈದ್ರಾಬಾದ್ ಮೂಲದ ಕಾರ್ಮಿಕರು ಕೆಲಸ ಮುಗಿಸಿಕೊಂಡು ವಾಪಸ್ ಯಾದಗಿರಿಯತ್ತ ತೆರಳುವಾಗ ಈ ದುರ್ಘಟನೆ ಸಂಭವಿಸಿದೆ.
Black water: ಬ್ಲ್ಯಾಕ್ ವಾಟರ್ ಎಂದರೇನು..? ಸೆಲೆಬ್ರಿಟಿಗಳು ಯಾಕೆ ಇದನ್ನು ಜಾಸ್ತಿ ಕುಡಿಯುತ್ತಾರೆ ಗೊತ್ತಾ.?
ಲಾರಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಇಬ್ಬರು ಕಾರ್ಮಿಕ ಮೃತ ಪಟ್ಟಿದ್ದು, ಗಂಭೀರ ಗಾಯಗೊಂಡ ಕಾರ್ಮಿಕನೊರ್ವನನ್ನು ರಾಯಚೂರು ರಿಮ್ಸ್ ಗೆ ದಾಖಲು ಮಾಡಲಾಗಿದೆ. ಸೈದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.