ಗದಗ: ತಂದೆಯೋರ್ವ ತನ್ನ ಮೂವರು ಮಕ್ಕಳೊಂದಿಗೆ ತುಂಗಭದ್ರಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಗದಗ ಜಿಲ್ಲೆಯ ಕೊರ್ಲಹಳ್ಳಿ ಬಳಿ ನಡೆದಿದೆ. ಮುಂಡರಗಿ ತಾಲೂಕಿನ ಮಕ್ತುಪೂರ ಗ್ರಾಮದ ನಿವಾಸಿ ಮಂಜುನಾಥ ಅರಕೇರಿ ಮೊದಲು ಮೂವರು ಮಕ್ಕಳನ್ನು ನದಿಗೆ ಎಸೆದು ಬಳಿಕ ತಾನೂ ಸಹ ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ವೇದಾಂತ 3, ಪವನ 4, ಧನ್ಯಾ 6 ನದಿ ಪಾಲಾದ ಮಕ್ಕಳು. ಕೌಟುಂಬಿಕ ಕಲಹವೇ ಈ ದುರಂತಕ್ಕೆ ಕಾರಣವೆಂದು ತಿಳಿದುಬಂದಿದೆ. ಇನ್ನು ನಾಲ್ವರ ಮೃತದೇಹಗಳನ್ನು ಅಗ್ನಿಶಾಮಕ ಸಿಬ್ಬಂದಿ ನದಿಯಿಂದ ಹೊರ ತೆಗೆದಿದ್ದಾರೆ. ಕೌಟುಂಬಿಕ ಕಲಹ,
ಪಿಯುಸಿ ಪಾಸ್ ಆದವರಿಗೆ ಗುಡ್ ನ್ಯೂಸ್: ಕರ್ನಾಟಕ ಲೋಕಾಯುಕ್ತದಲ್ಲಿದೆ ಭರ್ಜರಿ ಉದ್ಯೋಗಾವಕಾಶ – ಇಂದೇ ಅರ್ಜಿ ಸಲ್ಲಿಸಿ
ಸಾಲಭಾದೆಯಿಂದ ಬೇಸತ್ತು ಮಕ್ತುಂಪುರ ಗ್ರಾಮದ ಮಂಜುನಾಥ್ ತನ್ನ ಹೆಂಡತಿಯ ಅಣ್ಣನ ಮಗ ವೇದಾಂತ್ ಸೇರಿದಂತೆ ಇಬ್ಬರು ಮಕ್ಕಳೊಂದಿಗೆ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ. ಏನೇ ಇರಲಿ ಗಂಡ ಹೆಂಡಿರ ನಡುವೆ ಕೂಸು ಬಡವ ಎಂಬಂತೆ. ಏನೂ ಅರಿಯದ ಕಂದಮ್ಮಗಳನ್ನು ನದಿಗೆ ಎಸೆದ ಕಟುಕ ತಂದೆ ಕೃತ್ಯಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿದೆ.