ಬೆಂಗಳೂರು:- ರಾಜಧಾನಿ ಬೆಂಗಳೂರಿನ ಶೆಟ್ಟಿಹಳ್ಳಿಯಲ್ಲಿ ಮದುವೆಯಾಗವಂತೆ ಪೀಡಿಸುತ್ತಿದ್ದ ಮಾವನ ಕಿರುಕುಳ ಬೇಸತ್ತು 16 ವರ್ಷದ ಅಪ್ರಾಪ್ತೆ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜರುಗಿದೆ.
ನವೆಂಬರ್ 11ರಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಬಾಲಕಿಗೆ ಮದ್ವೆಯಾಗುವಂತೆ ಪೀಡಿಸಿ ಕಿರುಕುಳ ನೀಡಿದ್ದ 28 ವರ್ಷದ ಮಾವ ಸ್ವಾಗತ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ವಿಕ್ಟೋರಿಯಾ ಅಸ್ಪತ್ರೆಯಲ್ಲಿ ಬಾಲಕಿಯ ಮರಣೋತ್ತರ ಪರೀಕ್ಷೆ ಮಾಡಲಾಗಿದೆ
ಯುವತಿಯನ್ನ ಮದುವೆ ಮಾಡಿಕೊಳ್ಳುವಂತೆ ಪಿಡಿಸಿದ್ದಾನೆ. ಇದಕ್ಕೆ ಯುವತಿ ನಿರಾಕರಿಸಿದ್ದಕ್ಕೆ ನೀನು ನಾನು ಹೇಳಿದ ಹಾಗೆ ಕೇಳದಿದ್ದರೆ ನಿನಗೊಂದು ಗತಿ ಕಾಣಿಸುತ್ತೇನಿ. ನೀನು ನನ್ನ ಮಾತು ಕೇಳದಿದ್ದರೆ ಎಲ್ಲಿಯಾದರೂ ಹೋಗಿ ಸಾಯಿ ಎಂದು ಪ್ರಚೋದಿಸಿದ್ದಾನೆ ಎನ್ನುವ ಆರೋಪ ಕೇಳಿಬಂದಿದೆ
ಯುವತಿ ಮನನೊಂದು ನೇಣು ಹಾಕಿಕೊಂಡು ಮೃತಪಟ್ಟ ಬಗ್ಗೆ ತಾಯಿ ರಾಧ ಪೊಲೀಸರಿಗೆ ದೂರು ನೀಡಿದ್ದಾರೆ.