ಬೆಂಗಳೂರು: ತಂದೆಯೇ ಮಗನನ್ನು ಬಂದೂಕಿನಿಂದ ಗುಂಡು ಹಾರಿಸಿ ಕೊಲೆ ಮಾಡಿರುವ ಘಟನೆ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಕರೆಕಲ್ ನ ಮನೆಯೊಂದರಲ್ಲಿ ನಡೆದಿದೆ.
ನರ್ತನ್ ಬೋಪಣ್ಣ(32) ಕೊಲೆಯಾದ ಯುವಕನಾಗಿದ್ದು ವಿನಾಕಾರಣ ಗುಂಡು ಹಾರಿಸಿ ಮಗನನ್ನು ಹತ್ಯೆಗೈದ ಪಾಪಿ ತಂದೆ ನಿನ್ನೆ ಸಂಜೆ ನರ್ತನ್ ತಂದೆ ಸುರೇಶ್ ಗುಂಡು ಹಾರಿಸಿ ಕೊಲೆಗೈದಿರುವುದಾಗಿ ತಿಳಿದು ಬಂದಿದೆ.
ಘಟನೆ ಬಳಿಕ ಸ್ಥಳೀಯರ ಮಾಹಿತಿ ಆಧರಿಸಿ ಸ್ಥಳಕ್ಕೆ ಭೇಟಿ ನೀಡಿದ್ದ ಪೊಲೀಸರು ಈ ವೇಳೆ ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ನರ್ತನ್ ನನ್ನ ಆಸ್ಪತ್ರೆಗೆ ಸಾಗಿಸಿದ್ದ ಪೊಲೀಸರು ದುರಾದೃಷ್ಟವಶಾತ್ ಚಿಕಿತ್ಸೆ ಫಲಕಾರಿಯಾಗದೇ ಖಾಸಗಿ ಆಸ್ಪತ್ರೆಯಲ್ಲಿ ಯುವಕ ಸಾವು
ಸದ್ಯ ಮೃತದೇಹ ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು ಘಟನೆಯ ಹಿಂದಿನ ಕಾರಣ ತಿಳಿದು ಬಂದಿಲ್ಲ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರೆದಿದೆ.