ಕಲಬುರ್ಗಿ;- FDA ಅಕ್ರಮ ಉನ್ನತ ತನಿಖೆ ಗೃಹ ಸಚಿವರೇ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಹತ್ತು ದಿನಗಳ ಹಿಂದೆ ನಡೆದ ಎಫ್ ಡಿಎ ನೇಮಕಾತಿ ಪರೀಕ್ಷೆ ಅಕ್ರಮ ಕುರಿತಾಗಿ ಸರ್ಕಾರ ಮುಂಜಾಗ್ರತೆ ಕೈಗೊಂಡಿದ್ದರಿಂದಲೇ ಅಕ್ರಮ ನಡೆಯುವಾಗಲೇ ಬಯಲಿಗೆಳೆಯಲಾಗಿದೆ. ಆದರೂ ಪ್ರಕರಣದಲ್ಲಿ ಎಲ್ಲರ ಪಾತ್ರ ಬಯಲಿಗೆ ಬರುವಂತಾಗಲು ಯಾವ ಹಂತದ ತನಿಖೆ ನಡೆಸಬೇಕು ಎಂಬುದನ್ನು ಗೃಹ ಸಚಿವರು ನಿರ್ಧರಿಸುತ್ತಾರೆ.
ಪರೀಕ್ಷೆ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 20 ಜನರನ್ನು ಬಂಧಿಸಲಾಗಿದೆ. ಪೊಲೀಸರು ಎಲ್ಲ ಆಯಾಮಗಳಿಂದ ತನಿಖೆ ನಡೆಸುತ್ತಿದ್ದಾರೆ. ಬಿಜೆಪಿಯವರು ಆರೋಪಿಸಿದಂತೆ ಯಾರನ್ನೂ ರಕ್ಷಿಸುತ್ತಿಲ್ಲ. ಪಿಎಸ್ಐ ಹಗರಣದಲ್ಲಿ ಆಗಿನ ಬಿಜೆಪಿ ಸರ್ಕಾರ ನಡೆದುಕೊಂಡ ರೀತಿ ಎಲ್ಲರಿಗೂ ಗೊತ್ತಿದೆ. ಆದರೆ ತಮ್ಮ ಸರ್ಕಾರ ಯಾರನ್ನು ರಕ್ಷಿಸುತ್ತಿಲ್ಲ. ಎಲ್ಲ ಆಯಾಮಗಳಿಂದ ಸಮಗ್ರ ತನಿಖೆ ನಡೆಸಲಾಗುವುದು ಎಂದರು.