ನವದೆಹಲಿ: ತಮಿಳು ನಾಡು ಫೆಂಗಲ್ ಚಂಡಮಾರುತದ ಅಬ್ಬರಕ್ಕೆ ತತ್ತರಿಸಿ ಹೋಗಿದೆ. ಸೈಕ್ಲೋನ್ ನಿಂದಾಗಿ ಹಲವು ಜಿಲ್ಲೆಗಳಲ್ಲಿ ಸಾವುನೋವುಗಳು ಸಂಭವಿಸಿದ್ದು, ಅಪಾರ ಪ್ರಮಾಣದ ಹಾನಿಯುಂಟಾಗಿದೆ. ರಾಜ್ಯದಲ್ಲಿ ಪರಿಸ್ಥಿತಿ ನಿರ್ವಹಿಸಲು ಸಕಲ ನೆರವು ನೀಡುವುದಾಗಿ ಕೇಂದ್ರ ಭರವಸೆ ನೀಡಿದೆ.
ಫೆಂಗಲ್ ಚಂಡಮಾರುತ ಎಫೆಕ್ಟ್; ಹೊಸೂರು ಹೈವೇ ಜಲಾವೃತ, ಸಂಚಾರ ಅಸ್ತವ್ಯಸ್ತ
ತಮಿಳುನಾಡಿನ ಸದ್ಯದ ಪರಿಸ್ಥಿತಿ ಕುರಿತು ಕೇಂದ್ರ ಸರ್ಕಾರಕ್ಕೆ ತಮಿಳುನಾಡು ಸಿಎಂ ಸ್ಟಾಲಿನ್ ಪತ್ರ ಬರೆದಿದ್ದರು. ನೆರೆ ನಿರ್ವಹಣೆಗಾಗಿ 2 ಸಾವಿರ ಕೋಟಿ ನೆರವು ನೀಡುವಂತೆ ಮನವಿ ಮಾಡಿದ್ದರು. ಇದಕ್ಕೆ ಸ್ಪಂದಿಸಿರುವ ಪ್ರಧಾನಿ ಮೋದಿ ತಮಿಳುನಾಡು ಸಿಎಂ ಸ್ಟಾಲಿನ್ ಗೆ ಕರೆ ಮಾಡಿ ಮಾಹಿತಿ ಪಡೆದಿದ್ದು, ಎಲ್ಲಾ ರೀತಿಯ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ. ಫೆಂಗಲ್ ನಿಂದಾಗಿ ತಿರುವಣ್ಣಾಮಲೈ, ಆದ್ಯಪಾಡಿಯಲ್ಲಿ ಭೂಕುಸಿತ ಸಂಭವಿಸಿದ್ದು, ಈವರೆಗೂ 7 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಹಲವೆಡೆ ಬೆಳೆ ಹಾನಿಯಾಗಿದ್ದು, ರೈತರು ಕಣ್ಣೀರಿಡುವಂತಾಗಿದೆ.