ಬೆಂಗಳೂರು: ಫೆಂಗಲ್ ಚಂಡಮಾರುತದ ಪರಿಣಾಮ ರಾಜ್ಯದ ಜನರಿಗೆ ಜೋರಾಗಿ ತಟ್ಟಿದೆ. ಬೆಂಗಳೂರು, ಮೈಸೂರು, ಚಾಮರಾಜನಗರ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಬೆಂಗಳೂರಿನಲ್ಲೂ ಸಹ ಫೆಂಗಲ್ ಚಂಡಮಾರುತ ಭಾರೀ ಅವಾಂತರ ಸೃಷ್ಟಿಸಿದೆ. ಕಳೆದ 2-3 ದಿನಗಳಿಂದ ಸುರಿಯುತ್ತಿರುವ ಮಳೆಗೆ ಹೊಸೂರು ಹೈವೇ ಸಂಪೂರ್ಣ ಜಲಾವೃತವಾಗಿದೆ. ಹೊಸೂರು ಹೆದ್ದಾರಿಯಲ್ಲಿ ನೀರು ನಿಂತ ಪರಿಣಾಮ ಸಂಚಾರಕ್ಕೆ ತೊಂದರೆಯಾಗಿದೆ.
ಮುಡಾ ಹಗರಣ: ಇಡಿ ವಿಚಾರಣೆಗೆ ಹಾಜರಾದ ನಗಾರಭಿವೃದ್ಧಿ ಕಾರ್ಯದರ್ಶಿ ದೀಪಾ ಚೋಳನ್
ಹೆದ್ದಾರಿಯ ಸರ್ವೀಸ್ ರಸ್ತೆಯಲ್ಲಿ ಮಳೆ ನೀರು ತುಂಬಿ ಹರಿಯುತ್ತಿದ್ದು, ವಾಹನ ಸವಾರರು ಪರದಾಡುವಂತಾಗಿದೆ. ಹೊಸೂರು-ಬೆಂಗಳೂರು ಮುಖ್ಯರಸ್ತೆಯ ನೆರಳೂರಿನಲ್ಲಿ ಟ್ರಕ್ ವೊಂದು ಅರ್ಧದಷ್ಟು ಮುಳುಗಿದೆ. ಇದಲ್ಲದೇ ಹೆದ್ದಾರಿಯ ಅಂಡರ್ ಪಾಸ್ ಮುಂಭಾಗ ಸಹ ನೀರು ನಿಂತಿದೆ.