ಬೆಂಗಳೂರು:- ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು, ಭ್ರೂಣ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಧಿಕಾರಿಗಳ ಅಮಾನತು ಮಾಡಿ ಆದೇಶ ಹೊರಡಿಸಿದೆ.
ಮೈಸೂರು ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ.ಪಿ.ರಾಜು ಹಾಗೂ ಮೈಸೂರು ತಾಲೂಕು ಆರೋಗ್ಯಾಧಿಕಾರಿ ಡಾ.ರಾಜೇಶ್ವರಿ ಅವರನ್ನು ಅಮಾನತುಗೊಳಿಸಿದ್ದಾರೆ.
ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಪ್ರಕರಣವನ್ನು ಸಿಐಡಿ ತನಿಖೆಗೆ ನೀಡಿದೆ. ಇನ್ನು ಭ್ರೂಣ ಲಿಂಗ ಪತ್ತೆ ಕುರಿತಾಗಿ ಮಾಧ್ಯಮದವರೊಂದಿಗೆ ಮಾತನಾಡಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್, ‘ಇದು ರಾಜ್ಯಾದ್ಯಂತ ಇರುವ ಜಾಲ. ಭ್ರೂಣ ಹತ್ಯೆ ತಡೆಯಲು ಅಧಿಕಾರಿಗಳು ವಿಫಲ ಆಗಿದ್ದಾರೆ. ನಮ್ಮ ಇಲಾಖೆಯಲ್ಲಿ ಆಗಿರುವ ಲೋಪದ ಬಗ್ಗೆ ಮುಚ್ಚುಮರೆ ಇಲ್ಲ. ಯಾರು ತಪ್ಪು ಮಾಡಿದ್ದಾರೆ ಅವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮವಾಗುತ್ತೆ. ಯಾವುದೇ ಮುಲಾಜು ನೋಡಬೇಡಿ ಎಂದು ಸಿಎಂ ಹೇಳಿದ್ದಾರೆ ಎಂದಿದ್ದರು.
ಲಿಂಗಾನುಪಾತ ನೋಡಿದಾಗ ಹೆಣ್ಣುಮಕ್ಕಳ ಸಂಖ್ಯೆಯೂ ಕಡಿಮೆಯಿದೆ. ಸಮಾಜದಲ್ಲಿ ಹೆಣ್ಣು ಮಗು ಅಂದಾಕ್ಷಣ ಬೇಡ ಎನ್ನುವ ಪರಿಸ್ಥಿತಿ ಇದೆ. ಭ್ರೂಣ ಲಿಂಗ ಹತ್ಯೆ ತಡೆಗಟ್ಟಲು ಇಲಾಖೆ ಹೆಚ್ಚು ಗಮನ ಹರಿಸುತ್ತದೆ. ಪ್ರಕರಣ ಸಂಬಂಧ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ ಎಂದು ಹೇಳಿದ್ದಾರೆ