ಬೆಂಗಳೂರು:– ಭ್ರೂಣ ಹತ್ಯೆ ಒಳ್ಳೆಯ ಬೆಳವಣಿಗೆ ಅಲ್ಲ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಭ್ರೂಣ ಹತ್ಯೆ ಪ್ರಕರಣ ನಡೆದಿರುವುದು ಅಮಾನವೀಯ. ಈ ಪ್ರಕರಣದಿಂದಾಗಿ ಎಲ್ಲರೂ ತಲೆ ತಗ್ಗಿಸುವಂತಾಗಿದೆ. ಇಂತಹ ಅಮಾನವೀಯ ಕೆಲಸಗಳಿಗೆ ಬೆಂಬಲ ಕೊಡಬಾರದು. ಇದು ನಮ್ಮ ವೈವಸ್ಥೆಯ ವೈಫಲ್ಯ. ಮುಂದೆ ಈ ರೀತಿಯ ಪ್ರಕರಣ ಮರುಕಳಿಸದಂತೆ ಮನವಿ ಮಾಡುತ್ತೇನೆ ಎಂದರು.
ಗಂಡು ಮಕ್ಕಳಿಗಿಂತ ಹೆಣ್ಣು ಮಕ್ಕಳು ಪೋಷಕರನ್ನು ಚೆನ್ನಾಗಿ ನೋಡಿಕೊಳ್ಳುತ್ತಾರೆ. 21ನೇ ಶತಮಾನದಲ್ಲೂ ಹೆಣ್ಣು ಮಕ್ಕಳ ಬಗ್ಗೆ ತಾತ್ಸಾರ ಮನೋಭಾವ ಸರಿಯಲ್ಲ ಎಂದರು.
ಇನ್ನೂ ರಾಜ್ಯ ಸರ್ಕಾರವು ಬರ ನಿರ್ವಹಣೆಯಲ್ಲಿ ವಿಫಲವಾಗಿದ್ದು, ಸಚಿವರುಗಳ ಮೇಲಿನ ಆರೋಪಗಳ ಕುರಿತು ಬೆಳಗಾವಿ ಅಧಿವೇಶನದ್ಲಲಿ ಬಿಜೆಪಿ ಜೊತೆಗೂಡಿ ಜಂಟಿ ಹೋರಾಟ ನಡೆಸುವುದಾಗಿ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹೇಳಿದರು.
ಬರ ನಿರ್ವಹಣೆ ಮಾಡದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರದ ವಿರುದ್ಧ ಆರೋಪಿಸುತ್ತಿದ್ದಾರೆ. ಈ ಬಗ್ಗೆ ನನಗೆ ತಿಳುವಳಿಕೆ ಇಲ್ಲ ಎಂದು ಅವರು ಹೇಳಿದ್ದಾರೆ. ಹಾಗಾದರೆ ಬರ ನಿರ್ವಹಣೆ ವಿಷಯದಲ್ಲಿ ಅವರು ಏನು ಆಡಿದ್ದಾರೆ ಎಂಬುದನ್ನು ಹೇಳಲಿ ಎಂದರು.