ನೆಲಮಂಗಲ: ಭೀಕರ ಅಪಘಾತದಲ್ಲಿ ಅದೃಷ್ಟ ಎಂಬಂತೆ ಮೂವರು ಪಾರಾಗಿರುವ ಘಟನೆ ಬೆಂಗಳೂರು ನೆಲಮಂಗಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಜರುಗಿದೆ.
ವೇಗವಾಗಿ ಬಂದ ಲಾರಿ ಇನೋವಾ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ನೆಲಮಂಗಲದ ಮಾದನಾಯಕನಹಳ್ಳಿ ಬಳಿ ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದವರು ಪವಾಡ ರೀತಿಯಲ್ಲಿ ಪಾರಾಗಿದ್ದಾರೆ.
ನೆಲಮಂಗಲ ಮಾದನಾಯಕನಹಳ್ಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಜಾಮ್ ಆಗಿದೆ. ನೆಲಮಂಗಲ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ಮಾಡಿದ್ದಾರೆ.