ಕೋಲಾರ: ಪ್ರೌಢಶಾಲೆ ವಿದ್ಯಾರ್ಥಿಗಳ ನಡುವೆ ಮಾರಾಮಾರಿ ನಡೆದಿದ್ದು, ಕ್ಷುಲ್ಲಕ ವಿಚಾರಕ್ಕೆ ವಿದ್ಯಾರ್ಥಿಗಳು ಹೊಡೆದಾಡಿಕೊಂಡಿದ್ದಾರೆ. ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕು ಮಲ್ಲನಾಯಕನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಶಾಲೆಯಲ್ಲಿ ಊಟ ಮಾಡಿದ ನಂತರ ತಟ್ಟೆತೊಳೆಯುವ ವಿಚಾರದಲ್ಲಿ ಗಲಾಟೆ ನಡೆದಿದ್ದು, ಎರಡು ಗುಂಪಿನ ವಿದ್ಯಾರ್ಥಿಗಳ ನಡುವೆ ಮಾರಾಮಾರಿ ನಡೆದಿದೆ. ಮುಳಬಾಗಿಲು ಗ್ರಾಮಾಂತರ ಠಾಣಾ ಪೊಲೀಸರು ವಿದ್ಯಾರ್ಥಿಗಳನ್ನು ಪೋಷಕರ ಸಮ್ಮುಖದಲ್ಲಿ ವಿಚಾರಣೆ ನಡೆಸಿದ್ದಾರೆ. ಮುಳಬಾಗಿಲು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.