ದಾವಣಗೆರೆ: ಕೀಟನಾಶಕ ಸೇವಿಸಿ ಸಾವು- ಬದುಕಿನೊಂದಿಗೆ ಹೋರಾಟ ನಡೆಸುತ್ತಿದ್ದ ಮದ್ಯ ವ್ಯಸನಿಯೊಬ್ಬನನ್ನು ಜಿಲ್ಲಾಸ್ಪತ್ರೆಗೆ ಸೇರಿಸುವ ಮೂಲಕ ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಮಾನವೀಯತೆ ಮೆರೆದಿದ್ದಾರೆ.
ತಾಲೂಕಿನ ಅಣಬೇರು ಗ್ರಾಮದ ಮದ್ಯ ವ್ಯಸನಿ ರೇವಣಸಿದ್ದಪ್ಪ(40) ಎಂಬ ವ್ಯಕ್ತಿ ಎಂದಿನಂತೆ ಗುರುವಾರ ಮದ್ಯ ಸೇವನೆ ಮಾಡಿದ್ದಾನೆ. ಕುಡಿದ ಮತ್ತಿನಲ್ಲಿ ಕಳೆನಾಶಕ ಔಷಧಿಯನ್ನು ಸೇವಿಸಿದ್ದಾರೆ.
![Demo](https://ainlivenews.com/wp-content/uploads/2023/12/spoorthi-1.jpg)
ಇದನ್ನು ಗಮನಿಸಿದ ಕುಟುಂಬದವರು ಆಸ್ಪತ್ರೆಗೆ ಸೇರಿಸಲು ಆಂಬ್ಯುಲೆನ್ಸ್ ಗೆ ಫೋನ್ ಮಾಡಲು ತಡಕಾಡುವ ವೇಳೆಗೆ
ರಾಮಗೊಂಡನಹಳ್ಳಿ ಗ್ರಾಮದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಅದೇ ಗ್ರಾಮದ ಮಾರ್ಗದಲ್ಲಿ ಬರುತ್ತಿದ್ದ ಶಾಸಕ ಕೆ.ಎಸ್.ಬಸವಂತಪ್ಪ , ವಿಷಯ ತಿಳಿದ ಕೂಡಲೇ ವಿಷ ಕುಡಿದ ವ್ಯಕ್ತಿಯನ್ನು ತನ್ನ ಕಾರಿನಲ್ಲಿಯೇ ಚಿಗಟೇರಿ ಸಾರ್ವಜನಿಕ ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಬಂದು ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.
ಸಮಯಕ್ಕೆ ಸರಿಯಾಗಿ ಬಂದ ಶಾಸಕರು ಕಳೆನಾಶಕ ಸೇವಿಸಿ ಒದ್ದಾಡುತ್ತಿದ್ದ ಮದ್ಯ ವ್ಯಸನಿ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಿ ಆತನ ಪ್ರಾಣ ಕಾಪಾಡಲು ನೆರವಾಗಿದ್ದಾರೆ. ಇದೇ ಸಂದರ್ಭದಲ್ಲಿ ಆ ವ್ಯಕ್ತಿಯ ಕುಟುಂಬ ಸದಸ್ಯರು ಶಾಸಕ ಕೆ.ಎಸ್.ಬಸವಂತಪ್ಪ ಅವರಿಗೆ ಧನ್ಯವಾದ ಸಲ್ಲಿಸಿದ್ದಾರೆ.
![](https://ainlivenews.com/wp-content/uploads/2024/01/Ad-Banner-copy-scaled.jpg)