ಮಂಡ್ಯ :- ಬೆಂಗಳೂರು – ಮೈಸೂರು ಎಕ್ಸ್ ಪ್ರೆಸ್ ವೇಯಲ್ಲಿ ಸಂಚಾರ ನಿಯಮ ಉಲ್ಲಂಘಿಸಿ ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಕಾರು ಚಾಲಕನ ಮೇಲೆ ಸಂಚಾರ ಪೋಲೀಸ್ ಠಾಣೆ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.
ಮದ್ದೂರು ತಾಲೂಕಿನ ಗೆಜ್ಜಲಗೆರೆಯ ಮನ್ ಮುಲ್ ಬಳಿ ಎಕ್ಸ್ ಪ್ರೆಸ್ ವೇಯಲ್ಲಿ ವಿರುದ್ಧ ದಿಕ್ಕಿನಿಂದ ಕಾರು ಬರುತ್ತಿರುವುದು ITMS ಕ್ಯಾಮೆರಾದಲ್ಲಿ ದಾಖಲಾಗಿತ್ತು.
ಈ ಬಗ್ಗೆ ಪರಿಶೀಲನೆ ನಡೆಸಿದ ವೇಳೆ ಮೈಸೂರು ನೋಂದಣಿ ಸಂಖ್ಯೆ ಹೊಂದಿರುವ KA-09-Z-6545 ಕಾರು ವಿರುದ್ಧ ದಿಕ್ಕಿನಲ್ಲಿ ಬರುತ್ತಿರುವುದು ಕಂಡು ಬಂದಿತ್ತು. ಈ ಹಿನ್ನೆಲೆಯಲ್ಲಿ ಸಂಚಾರ ಪೋಲೀಸ್ ಠಾಣೆ ಪೊಲೀಸರು ಈ ತಿಂಗಳ ಜುಲೈ 1 ರಿಂದ ಜಾರಿಗೆ ಬಂದಿರುವ BNS ಕಾಯ್ದೆ ಅಡಿಯಲ್ಲಿ ಕಾರು ಮಾಲೀಕನ ವಿರುದ್ಧ ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ಎಫ್ಐಆರ್ ಸಲ್ಲಿಸಿದ್ದಾರೆ.
ವರದಿ : ಗಿರೀಶ್ ರಾಜ್ ಮಂಡ್ಯ