ನವದೆಹಲಿ: ಪವಿತ್ರವಾದ ತಿಮ್ಮಪ್ಪನ ಲಡ್ಡು ಪ್ರಸಾದವನ್ನ ಪ್ರಾಣಿಗಳ ಕೊಬ್ಬು ಬಳಸಿ ತಯಾರಿಸಲಾಗ್ತಿದ್ಯಂತೆ. ಲಡ್ಡು ಬಗ್ಗೆ ನಾಯ್ಡು ಹಾಕಿರೋ ಈ ಬಾಂಬ್ ತಿಮ್ಮಪ್ಪನ ಪ್ರಸಾದದ ಪಾವಿತ್ರ್ಯತೆಯ ಪ್ರಶ್ನೆ ಮೂಡಿದೆ. ಇದರ ಬೆನ್ನಲ್ಲೇ ತಿರುಪತಿ ಲಡ್ಡು ಪ್ರಸಾದದಲ್ಲಿ ಮೀನಿನ ಎಣ್ಣೆಯನ್ನು ಬೆರೆಸಿರುವುದು ತಪಾಸಣೆಯಿಂದ ಸ್ಪಷ್ಟವಾಗಿದೆ ಎಂದು ರಾಮಜನ್ಮಭೂಮಿಯ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ತಿಳಿಸಿದ್ದಾರೆ.
40 ವರ್ಷ ದಾಟಿದ ಪುರುಷರು ಆರೋಗ್ಯ ಕಾಪಾಡಿಕೊಳ್ಳುವುದು ಹೇಗೆ ಗೊತ್ತಾ..?
ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು ಬಳಕೆ ಪ್ರಕರಣ ಕುರಿತು ಮಾತನಾಡಿದ ಅವರು, ಇದೆಲ್ಲ ಯಾವಾಗ ನಡೆದಿದೆ ಎಂಬುದು ಇನ್ನೂ ತಿಳಿದಿಲ್ಲ. ಇದು ಪಿತೂರಿಯಾಗಿದೆ ಮತ್ತು ಸನಾತನ ಧರ್ಮದ ಮೇಲಿನ ದಾಳಿಯಾಗಿದೆ. ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಬೇಕು ಮತ್ತು ತಪ್ಪಿತಸ್ಥರನ್ನು ಶಿಕ್ಷಿಸಬೇಕು ಎಂದು ಆಗ್ರಹಿಸಿದ್ದಾರೆ. ತಿರುಪತಿ ದೇವಸ್ಥಾನ ಲಡ್ಡು ಪ್ರಸಾದದಲ್ಲಿ ಹಿಂದಿನ ಜಗನ್ಮೋಹನ ರೆಡ್ಡಿ ನೇತೃತ್ವದ ವೈಎಸ್ಆರ್ ಕಾಂಗ್ರೆಸ್ ಸರ್ಕಾರ ತುಪ್ಪದ ಬದಲು ಪ್ರಾಣಿಗಳ ಕೊಬ್ಬು ಬಳಸುತ್ತಿತ್ತು ಎಂದು ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಗಂಭೀರ ಆರೋಪ ಮಾಡಿದ್ದಾರೆ.