ಮಂಡ್ಯ:RSS ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ FIR ದಾಖಲು ಸಾಮಾಜಿಕ ಹೋರಾಟಗಾರ್ತಿ ನಜ್ಮಾ ನಝೀರ್ ದೂರಿನ ಅನ್ವಯ ಶ್ರೀರಂಗಪಟ್ಟಣ ಟೌನ್ ಪೊಲೀಸ್ ಠಾಣೆಯಲ್ಲಿ FIR ದಾಖಲಿಸಿದ್ದಾರೆ. IPC ಸೆಕ್ಷನ್ 354, 294, 509, 506, 153A, 295, 295 A, 298 ರ ಅಡಿ ಪ್ರಕರಣ ದಾಖಲು
ಶ್ರೀರಂಗಪಟ್ಟಣ ಸಂಕೀರ್ತನಾ ಯಾತ್ರೆಯಲ್ಲಿ ಮುಸ್ಲಿಂರ ವಿರುದ್ಧ ಅಕ್ಷೇಪಾರ್ಹ ಹೇಳಿಕೆ ವಿಚಾರ ಡಿಸೆಂಬರ್ 24 ರಂದು ನಡೆದ ಸಂಕೀರ್ತನಾ ಯಾತ್ರೆಯಲ್ಲಿ ಹನುಮ ಮಾಲಾಧಿಕಾರಿಗಳನ್ನ ಉದ್ದೇಶಿಸಿ ಮಾತನಾಡಿದ್ದ ಕಲ್ಲಡ್ಕ ಪ್ರಭಾಕರ್ ಭಟ್ .
ದೂರಿನ ಸಾರಂಶ ಮಹಿಳೆಯರನ್ನ ಚುಡಾಯಿಸಿ, ಲೈಂಕಿಗವಾಗಿ ಅವಮಾನಿಸಿ, ಲೈಂಗಿಕ ದೌರ್ಜನ್ಯಕ್ಕೆ ಪ್ರಚೋದಿಸಿ, ಸಾರ್ವಜನಿಕವಾಗಿ ಬೆದರಿಕೆಯೊಡ್ಡಿ, ಧರ್ಮವನ್ನ ಅವಮಾನಿಸಿ, ಧರ್ಮಗಳ ಮಧ್ಯೆ ಎತ್ತಿಕಟ್ಟಿ ಗಲಭೆ ನಡೆಸಿ, ಸಾವು ನೋವುಗಳನ್ನ ಪ್ರಚೋದಿಸಿದ ವೃತ್ತಿಪರ ಕ್ರಿಮನಲ್ ಆರೋಪಿ ಕಲ್ಲಡ್ಕ ಪ್ರಭಾಕರ್ ಭಟ್ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಿಸಿ ರೌಡಿಶೀಟರ್ ತೆರೆದು ಕಾನೂನು ಕ್ರಮ ತೆಗೆದುಕೊಳ್ಳುವಂತೆ ದೂರು.