ಬೆಂಗಳೂರು/ಬಳ್ಳಾರಿ:- Youtuber ಧೂತ ಸಮೀರ್ ಎಂಡಿ ವಿರುದ್ಧ FIR ದಾಖಲಾಗಿದ್ದು, ಜನಾಕ್ರೋಶ ವ್ಯಕ್ತವಾಗಿದೆ.
ದಕ್ಷಿಣ ಕನ್ನಡ ಸೌಜನ್ಯ ಪ್ರಕರಣದ ಕುರಿತು ವಿಡಿಯೋ ಮಾಡಿದ್ದ ಧೂತ ಸಮೀರ್ ಎಂಡಿ ವಿರುದ್ಧ ಬಳ್ಳಾರಿಯ ಕೌಲ್ ಬಜಾರ್ ಪೊಲೀಸರು ಎಫ್ಐಆರ್ ದಾಖಲಾಗಿದೆ. ಧರ್ಮಸ್ಥಳ ಕ್ಷೇತ್ರ ಹಾಗೂ ಭಕ್ತರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದಡಿ ಕೌಲ್ ಬಜಾರ್ ಠಾಣೆ ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದು, ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ.
ಫ್ಲೈವುಡ್ ಕಾರ್ಖಾನೆಗೆ ಬೆಂಕಿ ಅವಘಡ: ನಂದಿಸಲು ಹೋದ ಅಗ್ನಿಶಾಮಕ ವಾಹನಕ್ಕೂ ತಗುಲಿದ ಬೆಂಕಿ – ಮೂವರಿಗೆ ಗಾಯ!
ರಾಜ್ಯದಲ್ಲಿ ಕಳೆದ ಒಂದು ವಾರದಿಂದ ಸಂಚಲನ ಮೂಡಿಸಿರುವ ಸೌಜನ್ಯ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ದಶಕಗಳಿಗೂ ಹಿಂದಿನ ಪ್ರಕರಣವಾಗಿರುವ ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯ ಅವರ ಕೊಲೆ ಮತ್ತು ಸಾಮೂಹಿಕ ಅತ್ಯಾಚಾರದ ಪ್ರಕರಣದ ವಿಚಾರ ಈಚೆಗೆ ಚರ್ಚೆಯ ಮುನ್ನೆಲೆಗೆ ಬಂದಿದ್ದು. ಸೌಜನ್ಯ ಅವರ ರೇಪ್ ಅಂಡ್ ಮರ್ಡರ್ ಕೇಸ್ಗೆ ಸಂಬಂಧಿಸಿದಂತೆ ಯೂಟ್ಯೂಬರ್ ಸಮೀರ್ ಎಂಡಿ ಎನ್ನುವವರು ಸುದೀರ್ಘ ವಿಡಿಯೋವೊಂದನ್ನು ಮಾಡಿದ್ದರು. ಇದೀಗ ಸಮೀರ್ ಅವರ ವಿರುದ್ಧ ಬಳ್ಳಾರಿ ಜಿಲ್ಲೆಯ ಕೌಲ್ಬಝಾರ್ ಪೊಲೀಸ್ ಠಾಣೆಯ ಪೊಲೀಸರು ಇದೀಗ ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಂಡಿದ್ದಾರೆ. ಇದೀಗ ಈ ವಿಷಯ ಭಾರೀ ಚರ್ಚೆಗೆ ಕಾರಣವಾಗಿದೆ.
ಇನ್ನೂ ಯೂಟ್ಯೂಬರ್ ಸಮೀರ್ ಎಂ.ಡಿ. ವಿರುದ್ಧ ಪೊಲೀಸರ ನೋಟಿಸ್ ಗೆ ಕೋರ್ಟ್ ತಡೆಹಿಡಿದಿದೆ. ನೋಟಿಸ್ ಜೊತೆಗೆ ಎಫ್ಐಆರ್ ಪ್ರತಿ ನೀಡುವುದು ಕಡ್ಡಾಯ.ಪ್ರಭಾವಿ ಎಂದು ತೋರಿಸಿದ ಮಾತ್ರಕ್ಕೆ ತರಾತುರಿಯ ನೋಟಿಸ್ ಏಕೆ? ಸುತ್ತೋಲೆ ಪಾಲಿಸದೇ ನೋಟಿಸ್ ನೀಡಿದ್ದಕ್ಕೆ ಹೈಕೋರ್ಟ್ ಅಸಮಾಧಾನ ಹೊರ ಹಾಕಿದೆ. ಬಳ್ಳಾರಿ ಠಾಣೆಯ ಕೇಸ್ ತನಿಖೆಗೆ ಮಧ್ಯಂತರ ತಡೆ ನೀಡಿದೆ.