ನವದೆಹಲಿ:- ನೂತನ ಕ್ರಿಮಿನಲ್ ಕಾನೂನಿನಡಿ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ವಿರುದ್ಧ FIR ದಾಖಲಾಗಿದೆ.
IND Vs ZIM: ಭಾರತದ ಬೌಲಿಂಗ್ ದಾಳಿಗೆ ನಲುಗಿದ ಜಿಂಬಾಬ್ವೆ: 100 ರನ್ಗಳಿಂದ ಗೆದ್ದ ಟೀಮ್ ಇಂಡಿಯಾ!
ಶರ್ಮಾ ಅವರ ದೂರಿನ ಆಧಾರದ ಮೇಲೆ ಹೊಸ ಕ್ರಿಮಿನಲ್ ಕಾನೂನಿನ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 79 ಅಡಿಯಲ್ಲಿ ದೆಹಲಿ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಲೋಕಸಭೆಯಲ್ಲಿ ಪ್ರಶ್ನೆ ಕೇಳುವುದಕ್ಕೆ ಲಂಚ ಪಡೆದ ಆರೋಪದಲ್ಲಿ ಪಶ್ಚಿಮ ಬಂಗಾಳದ ಕೃಷ್ಣನಗರದ ಸಂಸದೆ ಮೊಯಿತ್ರಾ ಅವರನ್ನು ಅನರ್ಹಗೊಳಿಸಲಾಗಿತ್ತು. ನಂತರ ಈಚೆಗೆ ನಡೆದ ಚುನಾವಣೆಯಲ್ಲಿ ಸುಮಾರು 56,000 ಮತಗಳ ಅಂತರದಿಂದ ಜಯಗಳಿಸಿದ್ದಾರೆ.
ಗುರುವಾರ ಮಹಿಳಾ ಆಯೋಗದ ವೀಡಿಯೊಗಳಿಗೆ ಪ್ರತಿಕ್ರಿಯೆಯಾಗಿ ಹೇಳಿಕೆ ನೀಡಿದ್ದರು. ರಾಷ್ಟ್ರೀಯ ಮಹಿಳಾ ಆಯೋಗ (ಎನ್ಸಿಡಬ್ಲ್ಯು) ಶುಕ್ರವಾರದ ಹೇಳಿಕೆಯನ್ನು ಗಮನದಲ್ಲಿಟ್ಟುಕೊಂಡು ಮೊಯಿತ್ರಾ ವಿರುದ್ಧ ಪ್ರಕರಣ ದಾಖಲಿಸಲು ಕೋರಿತ್ತು ಎನ್ನಲಾಗಿದೆ.