ನೆಲಮಂಗಲ:– ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಬಿಜೆಪಿ ಅಭ್ಯರ್ಥಿ ಡಾ. ಕೆ ಸುಧಾಕರ್ ವಿರುದ್ಧ FIR ದಾಖಲಾಗಿದೆ.
IPL 2024: ಐಪಿಎಲ್ ನಲ್ಲಿ ಅಬ್ಬರಿಸುತ್ತಿರುವವರು ಆಲ್ಮೋಸ್ಟ್ RCBಯ ಮಾಜಿ ಆಟಗಾರರೇ..!
ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಬಿಜೆಪಿ ಮುಖಂಡ, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಡಾ. ಕೆ ಸುಧಾಕರ್ ಆಪ್ತ, ಬಿಜೆಪಿಯ ಮಾಜಿ ಜಿಲ್ಲಾಧ್ಯಕ್ಷ ಮಾದಾವರ ಗೋವಿಂದಪ್ಪ ಮನೆ ಮೇಲೆ ದಾಳಿ ಮಾಡಿ, 4.82 ಕೋಟಿ ಹಣವನ್ನು ಜಪ್ತಿ ಮಾಡಿದರು.
ಅಧಿಕಾರಿಗಳು ಹಣವನ್ನು ಜಪ್ತಿ ಮಾಡಿಕೊಂಡ ಬಳಿಕ ಬೆಂಗಳೂರು ಉತ್ತರ ತಾಲೂಕಿನ ಚುನಾವಣಾ ನೋಡೆಲ್ ಅಧಿಕಾರಿ ಮುನೀಶ್ ಮೌದ್ಗಿಲ್ ಅವರಿಗೆ ಬಿಜೆಪಿ ಅಭ್ಯರ್ಥಿ ಸುಧಾಕರ್ ವಾಟ್ಸಪ್ ಕರೆ ಮಾಡಿ, “ಗೋವಿಂದಪ್ಪ ಅವರಿಗೆ ಸಹಾಯ ಮಾಡಿ, ಅಲ್ಲದೆ ಹಣವನ್ನು ವಾಪಸು ಕೊಡಿಸುವಂತೆ” ಹೇಳಿದ್ದಾರೆ. ಅಲ್ಲದೆ
ಗೋವಿಂದಪ್ಪ ಕೂಡ ಮುನೀಶ್ ಮೌದ್ಗಿಲ್ ಅವರಿಗೆ ವಾಟ್ಸಪ್ ಮೂಲಕ “Please Help will we great full to you” ಎಂದು ಸಂದೇಶ ಕಳುಹಿಸಿದ್ದಾರೆ.
ಈ ವಿಚಾರವನ್ನು ಸಾಕ್ಷಿ ಸಮೇತ ಮುನೀಶ್ ಮೌದ್ಗಿಲ್ ಅವರು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳಿಗೆ ನೀಡಿದ್ದಾರೆ. ಬಳಿಕ ಎಸ್ಎಸ್ಟಿ ತಂಡದ ಮುಖ್ಯಸ್ಥ ದಶರಥ್ .ವಿ. ಕಂಬಾರ್ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.