ಬೆಂಗಳೂರು:- BJP ಶಾಸಕ ಮುನಿರತ್ನ ವಿರುದ್ಧ ಮತ್ತೊಂದು FIR ದಾಖಲಾಗಿದೆ.
ಕೊಲೆ ಯತ್ನ, ಸುಪಾರಿ ಆರೋಪಿಸಿ ಮಾಜಿ ಕಾರ್ಪೊರೇಟರ್ ಮಂಜುಳಾ ಪತಿ ನಾರಾಯಣಸ್ವಾಮಿ ನೀಡಿದ ದೂರಿನ ಮೇರೆಗೆ ನಂದಿನಿಲೇಔಟ್ ಪೊಲೀಸ್ ಠಾಣೆಯಲ್ಲಿ ಮುನಿರತ್ನ ಹಾಗೂ ಕೆಲವರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರ ಎಸ್ಐಟಿ ಅಧಿಕಾರಿಗಳು ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ 590 ಪುಟಗಳ ಚಾರ್ಜ್ಶೀಟ್ ಸಲ್ಲಿಸಿದ್ದಾರೆ. ಇದೇ ದಿನವೇ ಮತ್ತೊಂದು ಎಫ್ಐಆರ್ ದಾಖಲಾಗಿದೆ. ಹೀಗಾಗಿ ಮುನಿರತ್ನಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ
ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ಎಸ್ಎಲ್ ವರದಿ ಬಂದಿದ್ದು, ಜಾತಿ ನಿಂದನೆ ಮಾಡಿರುವ ಆಡಿಯೋ ಶಾಸಕ ಮುನಿರತ್ನ ಅವರದ್ದೇ ಎಂಬುವುದು ಎಫ್ಎಸ್ಎಲ್ ವರದಿಯಲ್ಲಿ ದೃಢಪಟ್ಟಿದೆ.