ಮೈಸೂರು:- ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಪದಬಳಕೆ ಮಾಡಿದ ಹಿನ್ನೆಲೆ, ಸಂಸದ ಪ್ರತಾತ್ ಸಿಂಹ ವಿರುದ್ಧ ಎಫ್ಐಅರ್ ದಾಖಲಾಗಿದೆ.
ಹುಣಸೂರಿನಲ್ಲಿ ನಡೆದ ಹನುಮ ಜಯಂತಿ ಕಾರ್ಯಕ್ರಮದಲ್ಲಿ ಮಾಧ್ಯಮಗಳಿಗೆ ಹೇಳಿಕೆ ಕೊಡುವಾಗ ಸೋಮಾರಿ ಸಿದ್ದ ಎಂಬ ಪದ ಬಳಕೆ ಮಾಡಿದ ಹಿನ್ನಲೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಪದಬಳಕೆ ಮಾಡಿರುವ ಆರೋಪ ಹಿನ್ನೆಲೆಯಲ್ಲಿ ನಿನ್ನೆ(ಮಂಗಳವಾರ)ಸಂಸದ ಪ್ರತಾಪ್ ಸಿಂಹ ಕಚೇರಿ ಮುಂದೆ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ದಿಢೀರ್ ಪ್ರತಿಭಟನೆ ನಡೆಸಿದ್ದರು.
ಸಂಸದರ ಕಚೇರಿ ಮುಂದೆ ಗ್ರಾಮಾಂತರ ಅಧ್ಯಕ್ಷ ಬಿ.ಜೆ.ವಿಜಯಕುಮಾರ್, ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ನೇತೃತ್ವದಲ್ಲಿ ದಿಢೀರ್ ಪ್ರತಿಭಟನೆ ನಡೆಸಿ ಸಂಸದರ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಪಟ್ಟು ಹಿಡಿದು, ಟೈರ್ಗೆ ಬೆಂಕಿ ಹಚ್ಚಿ ರಸ್ತೆ ತಡೆದು ಆಕ್ರೋಶ ವ್ಯಕ್ತಪಡಿಸಿದ್ದರು. ಎಫ್ಐಆರ್ ದಾಖಲಿಸುವ ಭರವಸೆ ನೀಡಿದ ಬಳಿಕ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಪ್ರತಿಭಟನೆಯನ್ನ ವಾಪಸ್ ಪಡೆದಿದ್ದರು.