ಹುಬ್ಬಳ್ಳಿ: ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಜಾತಿ, ಧರ್ಮದ ಹೆಸರಿನಲ್ಲಿ ಜನರ ಮಧ್ಯೆ ವೈರತ್ವ ಮತ್ತು ದ್ವೇಷ ಉಂಟುಮಾಡುವ ಹೇಳಿಕೆ ನಿಡಿದ್ದಾರೆ ಎಂದು ಆರ್.ಕುಮಾರಸ್ವಾಮಿ ಎಂಬವರು ದಿಂಗಾಲೇಶ್ವರ ಶ್ರೀಗಳ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ನವಲಗುಂದ ಪೊಲೀಸ್ ಠಾಣೆಯಲ್ಲಿ ಜನಪ್ರತಿನಿಧಿಗಳ ಕಾಯ್ದೆ 1950, 1951, 1989 (u/s-123 (3A), 125), IPC 1890 (u/s-505(2)) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಚುನಾವಣೆ ಕಾವೇರುತ್ತಿದೆ. ಇಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಮಧ್ಯೆ ನೇರ ಪೈಪೋಟಿ ಏರ್ಪಟ್ಟಿದೆ. ಪಕ್ಷೇತರರಾಗಿ ಸ್ಪರ್ಧಿಸಿದ್ದ ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಹಿಂಪಡೆದು ಕೊಂಡಿದ್ದರು. ಹೀಗಿದ್ದರೂ ಅವರು ಪ್ರಹ್ಲಾದ್ ಜೋಶಿ ವಿರುದ್ದ ವಾಗ್ದಾಳಿ ಮುಂದುವರೆಸಿದ್ದಾರೆ.
APL Card: ಸಿಹಿ ಸುದ್ದಿ: ಜೂನ್ʼನಿಂದ APL ಪಡಿತರ ಚೀಟಿ ವಿತರಣೆ..! ಹೊಸ ಕಾರ್ಡ್ʼಗಳಿಗೆ ಅರ್ಜಿ ಆಹ್ವಾನ
ಮೇ 2ರಂದು ನವಲಗುಂದ ಪಟ್ಟಣದ ಗಾಂಧಿ ಮಾರ್ಕೆಟ್ನಲ್ಲಿ ಕಾಂಗ್ರೆಸ್ ವತಿಯಿಂದ ಹಮ್ಮಿಕೊಂಡಿದ್ದ ಸ್ವಾಭಿಮಾನಿ ಮತದಾರರ ಸಮಾವೇಶದಲ್ಲಿ ಸ್ವಾಮೀಜಿ ಭಾಗವಹಿಸಿ, ಭಕ್ತರು ಹಾಗೂ ಮತದಾರರನ್ನು ಉದ್ದೇಶಿಸಿ ಮಾತನಾಡುತ್ತಾ ಪ್ರಹ್ಲಾದ್ ಜೋಶಿ ವಿರುದ್ಧ ಟೀಕಾಸಮರ ನಡೆಸಿದ್ದರು.