ಬೆಳಗಾವಿ: ಬಸ್ ಕೋಚ್ ಸಿದ್ಧಪಡಿಸುವ ಅಲ್ಮಾ ಫ್ಯಾಕ್ಟರಿಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಬೆಳಗಾವಿ ತಾಲೂಕಿನ ದೇಸೂರ ಗ್ರಾಮದಲ್ಲಿರುವ ಅಲ್ಮಾ ಫ್ಯಾಕ್ಟರಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ವೆಲ್ಡಿಂಗ್ ಕಿಡಿ ತಾಗಿ ಡೆಡ್ ಮೆಟಿರಿಯಲ್ಗೆ ಬೆಂಕಿ ಹೊತ್ತಿಕೊಂಡಿದ್ದು, ಕಾರ್ಖಾನೆಯ ಅರ್ಧ ಭಾಗಕ್ಕೆ ವ್ಯಾಪಿಸಿದೆ.
ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಕಾರ್ಮಿಕರು ಹೊರಗೆ ಓಡಿ ಬಂದಿದ್ದಾರೆ. 200ಕ್ಕೂ ಅಧಿಕ ಕಾರ್ಮಿಕರು ಕಾರ್ಖಾನೆಯಲ್ಲಿದ್ದರು. ಅದೃಷ್ಟವಶಾತ್ ಪ್ರಾಣಾಪಾಯದಿಂದ ಎಲ್ಲರೂ ಸಹ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.