ಬೆಂಗಳೂರು:- ನಗರದಲ್ಲಿ ಇತ್ತೀಚೆಗೆ ಬೆಂಕಿ ಅವಘಡ ಪ್ರಕರಣಗಳು ಹೆಚ್ಚಾಗುತ್ತಿದೆ. ಅದರಂತೆ ಇಂದು ಸಿಲಿಕಾನ್ ಸಿಟಿ ಬೆಂಗಳೂರಿನ ಅರಮನೆ ಮೈದಾನದ ಡೆಕೋರೇಷನ್ ವೇಸ್ಟ್ ವಸ್ತುಗಳು ಇದ್ದ ಜಾಗದಲ್ಲಿ ಬೆಂಕಿ ಹೊತ್ತಿಕೊಂಡಿದೆ.
ಕೂಡಲೇ ಸ್ಥಳೀಯರು ಅಗ್ನಿಶಾಮಕ ಸಿಬ್ಬಂದಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಮಾಹಿತಿ ಆಧರಿಸಿ ಸ್ಥಳಕ್ಕೆ ಧಾವಿಸಿರುವ ಅಗ್ನಿಶಾಮಕದಳ ಸಿಬ್ಬಂದಿ ಆಗಮಿಸಿ, ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ.
ಬೆಂಕಿ ಅವಘಡ ಸಂಭವಿಸಲು ನಿಖರ ಕಾರಣ ಏನು ಎಂಬುವುದು ತಿಳಿದು ಬಂದಿಲ್ಲ.