ಮುಂಬೈ:- ಮಹಾರಾಷ್ಟ್ರದ ಸಂಭಾಜಿ ನಗರದಲ್ಲಿ ಹ್ಯಾಂಡ್ ಗ್ಲೌಸ್ ತಯಾರಿಕಾ ಕಾರ್ಖಾನೆಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಆರು ಮಂದಿ ಕಾರ್ಮಿಕರು ಮೃತಪಟ್ಟಿರುವ ಘಟನೆ ಜರುಗಿದೆ.
ಇಂದು ನಸುಕಿನ ಜಾವ ಈ ದುರ್ಘಟನೆ ಸಂಭವಿಸಿದ್ದು, ಘಟನೆಯಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.
#WATCH | Chhatrapati Sambhajinagar, Maharashtra: Fire breaks out in a factory in the Waluj MIDC area. Operations to douse the fire are underway. Further details awaited. pic.twitter.com/mY9ChJv8n8
— ANI (@ANI) December 30, 2023
ಈ ಬಗ್ಗೆ ಮಾತನಾಡಿದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು, ಭಾನುವಾರ ನಸುಕಿನ ಜಾವ ಈ ದುರ್ಘಟನೆ ಸಂಭವಿಸಿದ್ದು, ಕಾರ್ಖಾನೆಯಲ್ಲಿದ್ದ ಆರು ಮಂದಿ ಕಾರ್ಮಿಕರು ಸಜೀವ ದಹನವಾಗಿದ್ದಾರೆ. ಘಟನೆಯಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರ್ಖಾನೆ ಒಳಗೆ ಇನ್ನಷ್ಟು ಮಂದಿ ಸಿಲುಕಿದ್ದು, ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ.
ಘಟನೆ ನಡೆದ ವೇಳೆ ಕಾರ್ಖಾನೆ ಒಳಗೆ 10-15 ಮಂದಿ ಕಾರ್ಮಿಕರಿದ್ದರು ಎಂದು ತಿಳಿದು ಬಂದಿದೆ. ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ದೌಡಾಯಿಸಿದ್ದು, ಬೆಂಕಿಯನ್ನು ನಂದಿಸುತ್ತಿವೆ. ಪ್ರಕರಣ ದಾಖಲಿಸಿಕೊಂಡು ತನಿಖೆಗೆ ಆದೇಶಿಸಲಾಗಿದ್ದು, ವರದಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.