ಬೆಂಗಳೂರು ;- ಎಲೆಕ್ಟ್ರಿಕಲ್ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ಬೆಂಗಳೂರಿನ ಬಿವಿಕೆ ಅಯ್ಯಂಗಾರ್ ರಸ್ತೆಯಲ್ಲಿ ಜರುಗಿದೆ.
ವಿಕಾಸ್ ಎಲೆಕ್ಟ್ರಿಕಲ್ಸ್ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿ ಹೊತ್ತಿಕೊಂಡ ತಕ್ಷಣ ಅಗ್ನಿಶಾಮಕ ದಳ ಸಿಬ್ಬಂದಿಗೆ ಸ್ಥಳೀಯರು ಕರೆ ಮಾಡಿದ್ದಾರೆ.

ಮಾಹಿತಿ ಆಧರಿಸಿ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಶಾರ್ಕ್ ಸರ್ಕ್ಯೂಟ್ ನಿಂದ ಬೆಂಕಿ ಅವಘಡ ಸಂಭವಿಸಿರುವ ಶಂಕೆ ವ್ಯಕ್ತವಾಗಿದೆ.
ಘಟನೆಯಿಂದ ಶಾಪ್ ನಲ್ಲಿದ್ದ ಎಲೆಕ್ಟ್ರಿಕಲ್ ವಸ್ತುಗಳು ಹಾನಿ ಹಾಗಿದ್ದು, ಸ್ಥಳೀಯರ ಮುನ್ನಚ್ಚರಿಕೆಯಿಂದ ಭಾರೀ ಅನಾಹುತ ತಪ್ಪಿದೆ.
