ಇಸ್ಲಾಮಾಬಾದ್: ಪಾಕಿಸ್ತಾನದ (Pakistan) ಕರಾಚಿಯ (Karachi) ರಶೀದ್ ಮಿನ್ಹಾಸ್ ರಸ್ತೆಯಲ್ಲಿರುವ ಬಹುಮಹಡಿ ಶಾಪಿಂಗ್ ಮಾಲ್ನಲ್ಲಿ ಭಾರಿ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, 11 ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕರಾಚಿ ಮೇಯರ್ ಮುರ್ತಾಜಾ ವಹಾಬ್ ಅವರು ಬೆಂಕಿ ಅವಘಡದಿಂದ ಆಗಿರುವ ಸಾವುನೋವುಗಳ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.
ಮೃತದೇಹಗಳನ್ನು ನಗರದ ವಿವಿಧ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ ಎಂದು ತಿಳಿಸಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪೋಸ್ಟ್ ಹಾಕಿರುವ ಅವರು, ಕೆಎಂಸಿ ಅಗ್ನಿಶಾಮಕ ದಳ ಈವರೆಗೆ ಬೆಂಕಿ ಅವಘಡದಲ್ಲಿ 9 ಮಂದಿ ಸಾವನ್ನಪ್ಪಿದ್ದಾರೆ ಎಂದು ಖಚಿತಪಡಿಸಿದ್ದಾರೆ.
NPCI guidelines: ಒಂದು ವರ್ಷದಿಂದ ಯಾವುದೇ ವಹಿವಾಟು ನಡೆಸದ ಯುಪಿಐ ಐಡಿ, ಯುಪಿಐ ನಂಬರ್ ಡೀ ಆ್ಯಕ್ಟಿವೇಟ್: ಕಾರಣ!
7 ಮೃತದೇಹಗಳನ್ನು ಜಿನ್ನಾ ಆಸ್ಪತ್ರೆಗೆ ಹಾಗೂ ಮತ್ತೆರಡು ಮೃತದೇಹಗಳನ್ನು ಸಿವಿಲ್ ಮತ್ತು ಅಬ್ಬಾಸಿ ಶಹೀದ್ ಆಸ್ಪತ್ರೆಗೆ ರವಾನಿಸಲಾಗಿದೆ. ಎರಡು ಸ್ನಾರ್ಕೆಲ್ಗಳು, ಎಂಟು ಅಗ್ನಿಶಾಮಕ ಟೆಂಡರ್ಗಳು ಮತ್ತು ಒಂದು ಬೌಸರ್ ಒಳಗೊಂಡ ಕಾರ್ಯಾಚರಣೆಯಲ್ಲಿ ಆರ್ಜೆ ಶಾಪಿಂಗ್ ಮಾಲ್ನಲ್ಲಿ ಸಿಲುಕಿಕೊಂಡಿದ್ದ ಸುಮಾರು 50 ಜನರನ್ನು ರಕ್ಷಿಸಲಾಗಿದೆ ಎಂದು ಅಗ್ನಿಶಾಮಕ ದಳ ತಿಳಿಸಿದೆ.