ಬೆಳಗಾವಿ: ಬೆಳಗಾವಿ ಜಿಲ್ಲೆಯ ಖಾನಾಪುರ ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಪಕ್ಕದಲ್ಲಿರುವ ಕೆನರಾ ಬ್ಯಾಂಕ್ ಶಾಖೆಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಇಂದು ಬೆಳಗಿನ ಜಾವದಲ್ಲಿ ವಾಹುವಿಹಾರಿಗಳಿಂದ ಪೊಲೀಸರು,
ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ನೀಡಿದ್ದು, ಕೂಡಲೇ ಸ್ಥಳಕ್ಕಾಗಮಿಸಿದ ಪೊಲೀಸರು, ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಹರಸಾಹಸ ಪಟ್ಟರು. ಕೆನಾರ ಬ್ಯಾಂಕ್ ಶಾಖೆಯಲ್ಲಿದ್ದ ಕಡತಗಳು ಬೆಂಕಿಗಾಹುತಿಯಾಗಿದ್ದು, ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿರುವ ಶಂಕೆಯಾಗಿದೆ.