ರಾಯ್ಪುರ:- ಛತ್ತೀಸ್ಗಢದ ಬಸ್ತಾರ್ ಪ್ರದೇಶದಲ್ಲಿ ಭದ್ರತಾ ಪಡೆ ಗುಂಡಿನ ದಾಳಿಗೆ ನಾಲ್ವರು ಮಾವೋವಾದಿಗಳು ಬಲಿ ಆಗಿರುವ ಘಟನೆ ಜರುಗಿದೆ.
ಹೆಂಡತಿ ಬಿಟ್ಟು 2ನೇ ಮದುವೆಗೆ ಮುಂದಾದ ಪತಿ: ಯುವತಿ ಮೇಲೆ ಕಣ್ಣಾಕಿದ್ದವ ಹೆಣವಾಗಿದ್ದು ಹೇಗೆ!?
ನಾರಾಯಣಪುರ ಮತ್ತು ದಾಂತೇವಾಡ ಜಿಲ್ಲೆಗಳ ಗಡಿಯಲ್ಲಿರುವ ದಕ್ಷಿಣ ಅಬುಜ್ಮಾದ್ನ ಕಾಡಿನಲ್ಲಿ ಭದ್ರತಾ ಸಿಬ್ಬಂದಿ ಹಾಗೂ ಮಾವೋವಾದಿಗಳ ನಡುವೆ ಗುಂಡಿನ ಚಕಮಕಿ ನಡೆದಿದೆ. ಗುಂಡಿನ ದಾಳಿಗೆ ನಾಲ್ವರು ಮಾವೋವಾದಿಗಳು ಬಲಿಯಾಗಿದ್ದಾರೆ. ಅಲ್ಲದೇ ಜಿಲ್ಲಾ ಮೀಸಲು ಗಾರ್ಡ್ನ ಹೆಡ್ ಕಾನ್ಸ್ಟೇಬಲ್ ಸನ್ನು ಕರಮ್ ತೀವ್ರಗಾಯಗೊಂಡು ಸಾವನ್ನಪ್ಪಿದ್ದಾರೆ.
ಗುಂಡಿನ ದಾಳಿ ಬಳಿಕ ನಾಲ್ವರು ಮಾವೋವಾದಿಗಳ ಮೃತದೇಹ ಮತ್ತು ಎಕೆ -47 ರೈಫಲ್ ಮತ್ತು ಸ್ವಯಂ ಲೋಡಿಂಗ್ ರೈಫಲ್ ಸೇರಿದಂತೆ ಸ್ವಯಂಚಾಲಿತ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ.