Lok Sabha Election 2024: ನಾಳೆ ಮೊದಲ ಹಂತದ ಮತದಾನ: ಸಾರ್ವತ್ರಿಕ ರಜೆ ಘೋಷಣೆ

ಬೆಂಗಳೂರು: ಲೋಕಸಭಾ ಚುನಾವಣಾ ಮತದಾನಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಏಪ್ರಿಲ್‌ 26 ರಂದು ಮತದಾನ ನಡೆಯುವ ಕ್ಷೇತ್ರಗಳಲ್ಲಿ ಸಾರ್ವತ್ರಿಕ ರಜೆ ಘೋಷಣೆ ಮಾಡಲಾಗಿದೆ. ಭಾರತ ಚುನಾವಣಾ ಆಯೋಗವು ಲೋಕಸಭೆಗೆ ಸಾರ್ವತ್ರಿಕ ಚುನಾವಣೆ-2024 ಘೋಷಿಸಿದ್ದು, ಅದರಂತೆ ಕರ್ನಾಟಕದಲ್ಲಿ ಮೊದಲ ಹಂತದಲ್ಲಿ ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಿಗೆ ಏಪ್ರಿಲ್‌ 26 ರಂದು ಶುಕ್ರವಾರ ಮತದಾನ ನಡೆಯಲಿದೆ. ಅಂದು ಚುನಾವಣಾ ಕ್ಷೇತ್ರಗಳ ವ್ಯಾಪ್ತಿಯಲ್ಲಿರುವಂತಹ ಮತದಾರರು ಮತ ಚಲಾಯಿಸಲು ಅನುಕೂಲವಾಗುವಂತೆ ಆಯಾ ಚುನಾವಣಾ ಕ್ಷೇತ್ರಗಳಿಗೆ ಸೀಮಿತಗೊಳಿಸಿ ಸಾರ್ವತ್ರಿಕ ರಜೆ ಘೋಷಿಸಲಾಗಿದೆ. ಯಾವೆಲ್ಲಾ ಸಂಸ್ಥೆಗಳು ರಜೆ? … Continue reading Lok Sabha Election 2024: ನಾಳೆ ಮೊದಲ ಹಂತದ ಮತದಾನ: ಸಾರ್ವತ್ರಿಕ ರಜೆ ಘೋಷಣೆ