ಬೆಂಗಳೂರು: ಮಹಾ ಕುಂಭಮೇಳಕ್ಕೆ ತೆರಳಿದ್ದ ಬೀದರ್ ಮೂಲದ ಐವರು ರಸ್ತೆ ಅಪಘಾತದಲ್ಲಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನೂ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಕ್ಕೆ ಅರಣ್ಯ ಸಚಿವ ಈಶ್ವರ ಖಂಡ್ರೆ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಲಾಡಗೇರಿಯ 14 ಜನರು ಪ್ರಯಾಣಿಸುತ್ತಿದ್ದ ಕ್ರೂಸರ್ ವಾಹನ ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಐವರು ಮೃತಪಟ್ಟಿದ್ದು,
8 ಜನರು ಗಾಯಗೊಂಡಿರುವ ಸುದ್ದಿ ತಿಳಿದು ಆಘಾತವಾಯಿತು. ಕೂಡಲೇ ಜಿಲ್ಲಾಡಳಿತಕ್ಕೆ ಸೂಚನೆ ನೀಡಿ ಮೃತರ ಪಾರ್ಥವ ಶರೀರವನ್ನು ಬೀದರ್ಗೆ ತರಲು ಮತ್ತು ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆಗೆ ವ್ಯವಸ್ಥೆ ಮಾಡಲು ಸೂಚಿಸಿರುವುದಾಗಿ ತಿಳಿಸಿದ್ದಾರೆ.