ಬೆಂಗಳೂರು:- ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಇನ್ನೂ ಐದು ದಿನ ಭಾರೀ ಮಳೆ ಆಗಲಿದೆ ಎಂದು ಭಾರತೀಯ ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬೆಳಗಾವಿ, ಬೀದರ್, ಕಲಬುರ್ಗಿ, ರಾಯಚೂರು, ಯಾದಗಿರಿ, ಚಿಕ್ಕಬಳ್ಳಾಪುರ, ಕೋಲಾರ ಸೇರಿದಂತೆ ಒಟ್ಟು 17 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ಮಿಧಿಲಿ ಚಂಡಮಾರುತ ಬಳಿಕ ಬಂಗಾಳಕೊಲ್ಲಿಯಲ್ಲಿ ಮತ್ತೊಂದು ಚಂಡಮಾರುತ ಸೃಷ್ಟಿಯಾಗಿದೆ. ಮಿಚುವಾಂಗ್ ಚಂಡಮಾರುತವು ನವೆಂಬರ್ 30ರ ವೇಳೆಗೆ ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿ ಇನ್ನಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ. ಈ ಚಂಡಮಾರುತವು ಗಂಟೆಗೆ 45 ರಿಂದ 80 ಕಿಲೋ ಮೀಟರ್ ವೇಗದಲ್ಲಿ ಬಂಗಾಳಕೊಲ್ಲಿ ಕರಾವಳಿ ಭಾಗಕ್ಕೆ ಬಂದಪ್ಪಳಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.