ದೇವನಹಳ್ಳಿ:- 76ನೇ ಗಣರಾಜ್ಯೋತ್ಸವ ದಿನಾಚರಣೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಪಟ್ಟಣದ ಸರ್ಕಾರಿ ಮೈದಾನದಲ್ಲಿ ಅದ್ಧೂರಿಯಾಗಿ ನಡೆದಿದೆ.
ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್.ಮುನಿಯಪ್ಪ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಧ್ವಜಾರೋಹಣ ಮಾಡಿಲಾಯ್ತು. ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ವ್ಯಕ್ತಿಗಳಿಗೆ ಸನ್ಮಾನಿಸಿ ಗೌರವಿಸಲಾಯ್ತು. ಕಾರ್ಯಕ್ರಮದಲ್ಲಿ ಪ್ರಭಾರ ಜಿಲ್ಲಾಧಿಕಾರಿಗಳಾದ ಅನುರಾಧ, ಎಸ್.ಪಿ. ಸಿ.ಕೆ.ಬಾಬಾ ಮತ್ತಿತರ ಗಣ್ಯರು ಭಾಗವಹಿಸಿದ್ರು.