ಧಾರವಾಡ:- ಸೇವೆ ಖಾಯಂಗೊಳಿಸಲು ಅಗ್ರಹಿಸಿ ಅತಿಥಿ ಉಪನ್ಯಾಸಕರಿಂದ ಪಂಜಿನ ಮೆರವಣಿಗೆ ನಡೆದಿದೆ. ನಗರದ ಕಲಾಭವನದಿಂದ ಕೋರ್ಟ್ ವೃತದವರೆಗೆ ಪಂಜಿನ ಮೆರವಣಿಗೆ ನಡೆಸಿ ಬೇಡಿಕೆ ಈಡೇರಿಕೆಗೆ ಒತ್ತಾಯ ಮಾಡಲಾಗಿದ್ದು, ಇದೇ ವೇಳೆ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರ ಹಾಕಿದ್ದಾರೆ.
ಹಲವು ದಿನಗಳಿಂದ ಧಾರವಾಡದಲ್ಲಿ ಅಥಿತಿ ಉಪನ್ಯಾಸಕರು ಪ್ರತಿಭಟನೆ ಧರಣಿ ನಡೆಸುತ್ತಿದ್ದರು. ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ ಅತಿಥಿ ಉಪನ್ಯಾಸಕರ ಸೇವೆ ಖಾಯಂ ಮಾಡಲು ಅಗ್ರಹಿಸಿದ್ದಾರೆ. ನಮ್ಮ ಬೇಡಿಕೆ ಈಡೇರುವವರೆಗೂ ಪ್ರತಿಭಟನೆ ಧರಣಿ ಕೈ ಬೀಡುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.