ಆಂಧ್ರ ಪ್ರದೇಶ: ಆಂಧ್ರ ಪ್ರದೇಶ ಮತ್ತು ತೆಲಂಗಾಣದಲ್ಲಿ ಮುಂಗಾರು ಮಳೆ ಅಬ್ಬರಿಸುತ್ತಿದೆ. ಎರಡೂ ರಾಜ್ಯಗಳಲ್ಲಿ ಕಳೆದೆರಡು ದಿನಗಳಿಂದ ಭಾರೀ ವರ್ಷಧಾರೆಯಾಗುತ್ತಿದೆ. ನದಿಗಳು ಅಪಾಯದ ಮಟ್ಟದಲ್ಲಿ ಹರಿಯುತ್ತಿವೆ. ನಿರಂತರ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಇದೀಗ ತನ್ನೂರಿನ ಜನರ ಸಂಕಷ್ಟಕ್ಕೆ ಜ್ಯೂ.ಎನ್ಟಿಆರ್ ನೆರವಾಗಿದ್ದಾರೆ. ಸಿಎಂ ಫಂಡ್ಗೆ ಒಂದು ಕೋಟಿ ರೂ. ದಾನ ಮಾಡಿ ನಟ ಮಾನವೀಯತೆ ಮೆರೆದಿದ್ದಾರೆ.
ಭಯಂಕರ ಮಳೆಗೆ ತತ್ತರಿಸಿರುವ ಆಂಧ್ರ ಪ್ರದೇಶ ಮತ್ತು ತೆಲಂಗಾಣ ಎರಡು ಕಡೆ 50 ಲಕ್ಷ ರೂ. ದೇಣಿಗೆ ನೀಡಿದ್ದಾರೆ. ಒಟ್ಟು ಒಂದು ಕೋಟಿ ರೂ. ದೇಣಿಗೆ ನೀಡುವ ಮೂಲಕ ಕಷ್ಟದಲ್ಲಿರುವ ಜನರ ನೆರವಿಗೆ ತಾರಕ್ ರಾಮ್ ಕೈಜೋಡಿಸಿದ್ದಾರೆ.ಭಾರೀ ಮಳೆಯಿಂದಾಗಿ ಎರಡು ತೆಲುಗು ರಾಜ್ಯಗಳಲ್ಲಿ ಇತ್ತೀಚೆಗೆ ಸಂಭವಿಸಿದ ಪ್ರವಾಹದಿಂದ ನಾನು ತೀವ್ರವಾಗಿ ಮನನೊಂದಿದ್ದೇನೆ. ಈ ದುರಂತದಿಂದ ತೆಲುಗು ಜನರು ಬೇಗ ಚೇತರಿಸಿಕೊಳ್ಳಲಿ ಎಂದು ಆ ದೇವರಲ್ಲಿ ಪ್ರಾರ್ಥಿಸುತ್ತೇನೆ.
ಯುವ ಜನತೆಗೆ ಬಂಪರ್ ಆಫರ್: ಇಲ್ಲಿ ಮದುವೆಯಾದವರಿಗೆ ಸರ್ಕಾರದಿಂದ ಸಿಗುತ್ತೆ ₹31 ಲಕ್ಷ..!
ನನ್ನ ಕಡೆಯಿಂದ ಆಂಧ್ರಪ್ರದೇಶ ಮತ್ತು ತೆಲಂಗಾಣ ಸರ್ಕಾರಗಳ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಎರಡು ತೆಲುಗು ರಾಜ್ಯಗಳ ಸರ್ಕಾರಗಳು ಪ್ರವಾಹ ವಿಕೋಪದಿಂದ ಪರಿಹಾರಕ್ಕಾಗಿ ಕೈಗೊಂಡ ಕ್ರಮಗಳಿಗೆ ಸಹಾಯ ಮಾಡಲು ತಲಾ 50 ಲಕ್ಷ ದೇಣಿಗೆಯನ್ನು ಘೋಷಿಸುತ್ತಿದ್ದೇನೆ’ ಎಂದು ಜೂನಿಯರ್ ಎನ್ಟಿಆರ್ ಟ್ವೀಟ್ ಮಾಡಿದ್ದಾರೆ.
ಅಂದಹಾಗೆ, ಉಡುಪಿ ಜಿಲ್ಲೆಯಲ್ಲಿ ಜ್ಯೂ.ಎನ್ಟಿಆರ್, ಕೃಷ್ಣಮಠ, ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ಕೊಟ್ಟು ಪೂಜೆ ಸಲ್ಲಿಸಿದ್ದರು. ಬಳಿಕ ಅಮ್ಮನ ಆಸೆ ತೀರಿಸಲು ಸೆ.2ರಂದು ಕುಂದಾಪುರದ ಕೆರಾಡಿ ಗ್ರಾಮದ ಮೂಡುಗಲ್ಲು ಕೇಶವನಾಥೇಶ್ವರ ಗುಹಾಂತರ ದೇವಸ್ಥಾನಕ್ಕೆ ಭೇಟಿ ನೀಡಿದರು.