ಇತ್ತೀಚೆಗಿನ ದಿನಗಳಲ್ಲಿ ಹೆಚ್ಚಿನವರಲ್ಲಿ ಮೂತ್ರ ಪಿಂಡದ ಕಲ್ಲಿನ ಸಮಸ್ಯೆಯು ಕಾಣಿಸಿಕೊಳ್ಳುತ್ತಿದೆ. ಆಹಾರದಲ್ಲಿ ಹೆಚ್ಚಿನ ಪ್ರಮಾಣದ ಆಕ್ಸಲೇಟ್ ಮತ್ತು ಕ್ಯಾಲ್ಸಿಯಂ ಕಲ್ಲುಗಳ ರಚನೆಗೆ ಕಾರಣವಾಗಬಹುದು. ಕಿಡ್ನಿ ಸ್ಟೋನ್ ಗಳಾದಾಗ ಹಳದಿ ಅಥವಾ ಕೆಂಪು ಬಣ್ಣದ ಮೂತ್ರ, ಕೆಳ ಬೆನ್ನು ನೋವು ಮತ್ತು ವಾಕರಿಕೆಯಂತಹ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ. ಮೂತ್ರಪಿಂಡದ ಕಲ್ಲಿನ ಸಮಸ್ಯೆಯು ಶುರುವಾದ ಆರಂಭದಲ್ಲೇ, ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಪಡೆದುಕೊಳ್ಳದಿದ್ದರೆ ಚೇತರಿಕೆಗೆ ಶಸ್ತ್ರಚಿಕಿತ್ಸೆ ಕಡ್ಡಾಯವಾಗಿ ಮಾಡಿಸಬೇಕಾಗುತ್ತದೆ.
ನೀವು ಕಿಡ್ನಿ ಸ್ಟೋನ್ ನಿಂದ ಬಳಲುತ್ತಿದ್ದರೆ ಈ ಉಪಯುಕ್ತ ಮಾಹಿತಿ ಉಳ್ಳ ಸುದ್ದಿ ನೋಡಲೇಬೇಕು. ಎಸ್, ಮೂತ್ರಪಿಂಡದ ಕಲ್ಲುಗಳು ಅತ್ಯಂತ ಅಪಾಯಕಾರಿ. ಇದರಿಂದ ಹೊಟ್ಟೆಯಲ್ಲಿ ಅಸಹನೀಯ ನೋವು ಉಂಟಾಗುತ್ತದೆ.
ಕಿಡ್ನಿಯಲ್ಲಿ ಕಲ್ಲು ಇರುವವರು ಎರಡು ಚಮಚ ಈ ಎಲೆಯ ರಸವನ್ನು ಖಾಲಿ ಹೊಟ್ಟೆಗೆ ಕುಡಿಯಬೇಕು. ಮೂತ್ರಪಿಂಡವನ್ನು ಶುದ್ಧೀಕರಿಸುವ ಗುಣ ರಾಮಫಲದ ಎಲೆಗಳಲ್ಲಿ ಇದೆ. ಮೂತ್ರಪಿಂಡದ ಕಲ್ಲು ಕರಗಿ ನೋವೇ ಇಲ್ಲದಂತೆ ಮೂತ್ರದ ಮೂಲಕ ಹೊರ ಹೋಗುತ್ತದೆ.
ಈ ಎಲೆಯನ್ನು ಬಾಯಿಗೆ ಹಾಕಿಕೊಂಡು ಸ್ವಲ್ಪ ಸ್ವಲ್ಪವಾಗಿ ಜಗಿದು ರಸವನ್ನು ನುಂಗುವುದರಿಂದಲೂ ಕಿಡ್ನಿ ಸ್ಟೋನ್ ಸಮಸ್ಯೆಗೆ ಪರಿಹಾರ ಸಿಗುತ್ತದೆ. ಶುಗರ್ ಮತ್ತು ಬಿಪಿಯಿಂದ ಬಳಲುತ್ತಿರುವವರು ಈ ಎಲೆಗಳನ್ನು ತಮ್ಮ ಆಹಾರದ ಭಾಗವಾಗಿ ಮಾಡಿಕೊಳ್ಳುವ ಮೂಲಕ ಸಮಸ್ಯೆಗೆ ಪರಿಹಾರ ಪಡೆಯಬಹುದು.