ಬೆಂಗಳೂರು: ಕೆಎಸ್ಆರ್ಟಿಸಿ ಬಸ್ ಚಾಲಕನ ನಿರ್ಲಕ್ಷ್ಯ ಹಾಗೂ ಅತಿ ವೇಗದ ಬಸ್ ಚಾಲನೆಗೆ ಫುಡ್ ಡೆಲಿವರಿ ಬಾಯ್ ಬಲಿಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬಸವಾರಾಜು ಮೃತ ಫುಡ್ ಡೆಲಿವರಿ ಬಾಯ್. ತಡರಾತ್ರಿ 2 ಗಂಟೆ ವೇಳೆ ಸ್ಯಾಟಲೈಟ್ ಬಸ್ ನಿಲ್ದಾಣದ ಮುಂಭಾಗ ಈ ಅಪಘಾತ ಸಂಭವಿಸಿದೆ. ಫುಡ್ ಡೆಲಿವರಿ ಬಾಯ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
Cumin Seeds Benefits: ಅಬ್ಬಾಬ್ಬ ಜೀರಿಗೆ ಸೇವಿಸುವುದರಿಂದ ಆಗುವ ಪ್ರಯೋಜನಗಳು ಒಂದೆರಡಲ್ಲ..!
ಮೈಸೂರು ರೋಡ್ ಕಡೆಗೆ ರಾತ್ರಿ ಫುಡ್ ಡೆಲಿವರಿ ಮಾಡಲು ಬಸವರಾಜು ತೆರಳುತ್ತಿದ್ದ. ಈ ವೇಳೆ ಹಿಂಬದಿಯಿಂದ ವೇಗವಾಗಿ ಬಂದ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದಿದೆ. ಬಸ್ ಡಿಕ್ಕಿಯಾದ ರಭಸಕ್ಕೆ ಸ್ಥಳದಲ್ಲೇ ಬಸವರಾಜು ಮೃತಪಟ್ಟಿದ್ದಾನೆ. ಸ್ಥಳಕ್ಕೆ ಬ್ಯಾಟರಾಯನಪುರ ಸಂಚಾರಿ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಕೆಎಸ್ಆರ್ಟಿಸಿ ಬಸ್ ಹಾಗೂ ಚಾಲಕನನ್ನ ವಶಕ್ಕೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.