ಬೆಂಗಳೂರು: ಒಂದಲ್ಲ, ಎರಡಲ್ಲ, ಒಟ್ಟು ಐವರು ಬಾಣಂತಿಯರ ಸಾವು. ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸಾವು ದಿನದಿಂದ ದಿನಕ್ಕೆ ಒಂದೊಂದು ತಿರುವು ಪಡೆದುಕೊಳ್ಳುತ್ತಿದ್ರೆ, ಮತ್ತೊಂದೆಡೆ ಬಾಣಂತಿಯರ ಸರಣಿ ಸಾವು ಬಳಿಕ ಆಹಾರ ಸುರಕ್ಷತಾ ಇಲಾಖೆ ಹಾಗೂ ಔಷಧ ನಿಯಂತ್ರಣ ಇಲಾಖೆಯನ್ನು ಸರ್ಕಾರ ವಿಲೀನಗೊಳಿಸಿದೆ. ಈಗ ಎರಡು ಇಲಾಖೆಯನ್ನು ವಿಲೀನಗೊಳಿಸಿ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಅಂತಾ ಹೊಸ ಮರುನಾಮಕರಣ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ರಾಜ್ಯದಲ್ಲಿ ಪರಿಶಿಷ್ಟ ಜಾತಿ-ಪಂಗಡಗಳ ಸಮುದಾಯದ ಜನರಿಗೆ ಆರೋಗ್ಯ ಸೇವೆಗಾಗಿ, ಹೆಚ್ಚು ಚಿಕಿತ್ಸಾ ವೆಚ್ಚ ಇರುವ ಕಾಯಿಲೆಗಳಿಗೆ ಹಾಗೂ ವಿರಳ ಆರೋಗ್ಯ ಸೇವೆ ಒದಗಿಸಲು ಕಾರ್ಫಸ್ ಫಂಡ್. ಒಟ್ಟು 45 ಕೋಟಿಯನ್ನು ಸರ್ಕಾರ ಮೀಸಲಿಟ್ಟಿದೆ. ಬಳ್ಳಾರಿ ಜಿಲ್ಲಾಸ್ಪತ್ರೆಯ ಬಾಣಂತಿಯರ IV ರಿಂಗರ್ ಲ್ಯಾಕ್ಟೇಟ್ ದ್ರಾವಣ ಕಾರಣ ಎಂಬ ವಿಚಾರ ಬಹಿರಂಗಗೊಳ್ಳುತ್ತಿದ್ದಂತೆ ಔಷಧ ನಿಯಂತ್ರಣ ಇಲಾಖೆ ವಿರುದ್ಧ ಹಲವು ಆರೋಪ ಕೇಳಿಬಂದಿದ್ದವು.
ಶನಿವಾರ ಈ ಕೆಲಸಗಳಲ್ಲಿ 1 ಕೆಲಸ ಮಾಡಿದರೂ ನಿಮ್ಮ ಖಜಾನೆ ತುಂಬುತ್ತದೆ..!
ಇದು ರಾಜ್ಯ ಸರ್ಕಾರ ಮುಜುಗರಗೊಳ್ಳುವಂತೆ ಮಾಡಿತ್ತು. ಬಳಿಕ, ಡಿಸೆಂಬರ್ 6 ರಂದು ನಡೆದ ಸಂಪುಟ ಸಭೆಯಲ್ಲಿ ಎರಡೂ ಇಲಾಖೆ ವಿಲೀನಕ್ಕೆ ಸಚಿವರು ಒಪ್ಪಿಗೆ ಸೂಚಿಸಿದ್ದರು. ಸಚಿವ ಸಂಪುಟದಲ್ಲಿ ಅನುಮೋದನೆ ದೊರೆತ ಬಳಿಕ ಸರ್ಕಾರ ಎರಡೂ ಇಲಾಖೆಗಳನ್ನು ವಿಲೀನಗೊಳಿಸಿ ಆದೇಶ ಹೊರಡಿಸಿದೆ.
ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಹಾಗೂ ಔಷಧ ನಿಯಂತ್ರಣ ಇಲಾಖೆಯ ಕಾರ್ಯವೈಖರಿಗಳು ಬಹುತೇಕ ಒಂದೇ ರೀತಿಯಲ್ಲಿರುವುದರಿಂದ ಈ ಎರಡು ಇಲಾಖೆಗಳನ್ನು ವಿಲೀನಗೊಳಿಸಲಾಗಿದೆ. ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಆಯುಕ್ತರು ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇವರ ಆಡಳಿತಾತ್ಮಕ ನಿಯಂತ್ರಣದಡಿಯಲ್ಲಿ ಎರಡು ಇಲಾಖೆಗಳ ಎಲ್ಲ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಾರ್ಯನಿರ್ವಹಿಸುತ್ತಾರೆ.