ಬೆಂಗಳೂರು:- ಕಳಪೆ ಆಹಾರ ಪೂರೈಕೆ ಹಿನ್ನೆಲೆ ರಾಜ್ಯದ 127 ಪಿಜಿಗಳಿಗೆ ಆಹಾರ ಸುರಕ್ಷತಾ ಇಲಾಖೆ ನೋಟಿಸ್ ಕೊಟ್ಟಿದೆ.
ಪಿಜಿಗಳಲ್ಲಿ ಆಹಾರ ಸುರಕ್ಷತೆ ಕಾಪಾಡಿಕೊಳ್ಳದ ಹಿನ್ನೆಲೆ ರಾಜ್ಯದ 127 ಪಿಜಿಗಳಿಗೆ ಆಹಾರ ಸುರಕ್ಷತಾ ಮತ್ತು ಗುಣಮಟ್ಟ ಇಲಾಖೆ ನೋಟಿಸ್ ನೀಡಿದೆ.
ರಾಜ್ಯದ 305 ಪಿಜಿಗಳಿಗೆ ಇಲಾಖೆ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ 127 ಪಿಜಿಗಳಲ್ಲಿ ಆಹಾರ ಪದಾರ್ಥಗಳನ್ನು ಸಂಗ್ರಹ ಮಾಡಲಾಗಿದೆ.
ಸಂಗ್ರಹಿಸಿದ ಆಹಾರ ಪದಾರ್ಥಗಳನ್ನು ಪರೀಕ್ಷಿಸಿದ ವೇಳೆ ಸುರಕ್ಷತೆ ಕಾಪಾಡದೇ ಇರುವುದು ಪತ್ತೆಯಾಗಿದೆ. ಈ ಹಿನ್ನೆಲೆ 127 ಪಿಜಿಗಳಿಗೆ ನೋಟಿಸ್ ನೀಡಲಾಗಿದೆ. ಅದರಲ್ಲಿ ನಾಲ್ಕು ಪಿಜಿಗಳಿಗೆ ಸೇರಿ ಒಟ್ಟು 21,000 ರೂ. ದಂಡ ಹಾಕಲಾಗಿದೆ