ಬೆಂಗಳೂರು: ಮೊದಲ ಬಾರಿಗೆ ಪೊಲೀಸ್ ಅಧಿಕಾರಿಯೊಬ್ಬರ ಮಗಳು ಚಿನ್ನದ ಸ್ಮಗ್ಲಿಂಗ್ನಲ್ಲಿ ಭಾಗಿಯಾಗಿದ್ದು ಬೆಳಕಿಗೆ ಬಂದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು,
ಒಬ್ಬ ಹಿರಿಯ ಐಪಿಎಸ್ ಪೊಲೀಸ್ ಅಧಿಕಾರಿ ಮಗಳ ನೇತೃತ್ವದಲ್ಲಿ ಇಷ್ಟು ದೊಡ್ಡ ಚಿನ್ನ ಕಳ್ಳಸಾಗಾಟ ನಡೆದಿರುವುದನ್ನು ನಾವೆಂದೂ ಕೇಳಿರಲಿಲ್ಲ. ಇದು ಗಂಭೀರ ಸ್ವರೂಪ ಪಡೆದುಕೊಂಡಿದೆ. ಇಲ್ಲಿ ಶಕ್ತಿಶಾಲಿ ಮುಖ್ಯಮಂತ್ರಿ ಇದ್ದು, ಅವರಿಗೆ ಪ್ರಕರಣದ ಮಾಹಿತಿ ಇರುತ್ತದೆ. ಅವರು ಅದನ್ನು ಬಹಿರಂಗಪಡಿಸಲಿ. ಇದು ಗಾಳಿಯಲ್ಲಿ ಗುಂಡು ಹೊಡೆಯುವ ಕೆಲಸವೂ ಅಲ್ಲ ಎಂದು ಅವರು ಸ್ಪಷ್ಟಪಡಿಸಿದರು.
Cardamom Benefits: ಪ್ರತಿದಿನ ಏಲಕ್ಕಿ ಸೇವಿಸಿದರೆ ಎಷ್ಟೆಲ್ಲಾ ಆರೋಗ್ಯ ಪ್ರಯೋಜನಗಳಿವೆ ಗೊತ್ತಾ..?
ಕೆಂಪೇಗೌಡ ಏರ್ಪೋರ್ಟ್ನಲ್ಲಿ ಪ್ರೋಟೋಕಾಲ್ ಸಿಗುತ್ತದೆ. ಸೆಕ್ಯುರಿಟಿ ತಪಾಸಣೆ ಆಗುವುದಿಲ್ಲ ಎಂದಾದರೆ, ಇದರ ಹಿಂದೆ ಕೆಲವು ಘಟಾನುಘಟಿಗಳಿದ್ದಾರೆ. ಅಲ್ಲದೇ ಕೆಲವು ಸಚಿವರಿದ್ದಾರೆ ಎಂಬುದು ಕೂಡ ಹೊರಕ್ಕೆ ಬರುತ್ತಿದೆ. ಈಗಾಗಲೇ ಸಿಬಿಐ, ಇ.ಡಿ. ತನಿಖೆ ನಡೆಯುತ್ತಿದೆ.
ಈ ಗಂಭೀರ ಪ್ರಕರಣದ ಹಿಂದಿರುವವರ ಮಾಹಿತಿ ಮುಖ್ಯಮಂತ್ರಿಗಳಿಗೆ ಇದ್ದೇ ಇರುತ್ತದೆ ಎಂದರು. ಸ್ಮಗ್ಲಿಂಗ್ ಹಿಂದೆ ಇರುವ ಹವಾಲಾ ನಿರತರು, ಚಿನ್ನ ಕಳ್ಳಸಾಗಾಟದ ಮಾಫಿಯಾಗಳು, ಬೆಂಬಲ ಕೊಟ್ಟ ರಾಜಕಾರಣಿಗಳು, ಮಂತ್ರಿಗಳು, ಮಾಜಿ ಮಂತ್ರಿಗಳು, ಶಾಸಕರು, ಮಾಜಿ ಶಾಸಕರು ಯಾರೆಂಬುದನ್ನು ಸಿಎಂ ಅವರು ಬಹಿರಂಗಪಡಿಸಲಿ ಎಂದು ಒತ್ತಾಯಿಸಿದರು.