ಬೆಂಗಳೂರು :ಬೆಂಗಳೂರು ನಗರದ ಗೋಪಾಲನ್ ಮಾಲ್ ಬಳಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ವಿದೇಶಿ ಪ್ರಜೆಯನ್ನು ಪೊಲೀಸರು ಬಂಧಿಸಿದ್ದಾರೆ. ನಗರದ ಹಳೇ ಮದ್ರಾಸ್ ರಸ್ತೆಯ ಗೋಪಾಲನ್ ಮಾಲ್ ಬಳಿ ಸಿಂಥೆಟಿಕ್ ಡ್ರಗ್ಸ್ ಮಾರಾಟ ಮಾಡುತ್ತಿದ್ದು, ನೈಜೀರಿಯಾ ಮೂಲದ ಆಗು ಎಜೆಮ್ ಅರುವಾ ಬಂಧಿತ ಆರೋಪಿ ಎಂದು ಹೇಳಲಾಗಿದೆ. ಇನ್ನೂ ಖಚಿತ ಮಾಹಿತಿ ಆಧಾರದ ಮೇಲೆ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿ ಆಗಿದ್ದು,
ಬಂಧಿತನಿಂದ 12 ಲಕ್ಷ ಮೌಲ್ಯದ 50 ಗ್ರಾಂ, ಕೊಕೇನ್ 105 ಗ್ರಾಂ ಎಂಡಿಎಂಎ 80 ಎಕ್ಸ್ ಟೆಸಿ ಪಿಲ್ಸ್ ಹಾಗೂ ಕೃತ್ಯಕ್ಕೆ ಬಳಸಿದ 1 ಕಾರನ್ನು ವಶಪಡಿಸಿಕೊಂಡಿದ್ದಾರೆ. ಅಲ್ಲದೇ ಮೆಡಿಕಲ್ ವೀಸಾದಲ್ಲಿ ಬಂದು ವೀಸಾ ಮುಗಿದ ನಂತರವೂ ಅಕ್ರಮವಾಗಿ ವಾಸ ಮಾಡುತ್ತಿದ್ದರು ಎಂದು ವಿಚಾರಣೆಯಲ್ಲಿ ತಿಳಿದು ಬಂದಿದೆ. ಸದ್ಯ ಈ ಸಂಬಂಧ ಬೈಯಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
