ಹುಬ್ಬಳ್ಳಿ: ಭಾರತೀಯ ವಿದೇಶಾಂಗ ಸಚಿವ ಎಸ್. ಜೈಶಂಕರ್ ಇಂದು ಹುಬ್ಬಳ್ಳಿಗೆ ಆಗಮಿಸಿದ್ದಾರೆ. ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಕೇಂದ್ರ ಸರ್ಕಾರ ಕೈಗೊಂಡ ಅಭಿವೃದ್ಧಿ ಕಾರ್ಯಗಳ ಕುರಿತಾದ ಪುಸ್ತಕವನ್ನು ಅವರು ಬಿಡುಗಡೆಗೊಳಿಸಲಿದ್ದಾರೆ. ಹುಬ್ಬಳ್ಳಿ ಬಿವಿಬಿ ಕಾಲೇಜು ಆವರಣದಲ್ಲಿಇಂದು ಪುಸ್ತಕ ಬಿಡುಗಡೆ ಸಮಾರಂಭ ಜರುಗಲಿದೆ.
Petrol-Diesel Price Today: ದೇಶದ ಪ್ರಮುಖ ನಗರಗಳಲ್ಲಿನ ಪೆಟ್ರೋಲ್-ಡೀಸೆಲ್ ಬೆಲೆ ವಿವರ ಇಲ್ಲಿದೆ ನೋಡಿ..!
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಧಾರವಾಡ ಲೋಕಸಭೆ ಕ್ಷೇತ್ರದಲ್ಲಿ ಕಳೆದ 10 ವರ್ಷಗಳಲ್ಲಿ ಕೈಗೊಂಡ ಅಭಿವೃದ್ಧಿ ಕಾರ್ಯಗಳು ಮತ್ತು ಸಂಸದ ಪ್ರಲ್ಹಾದ್ ಜೋಶಿ ಅವರ 16 ವರ್ಷದ ಅವಧಿಯಲ್ಲಿ ಕೈಗೊಂಡ ಅಭಿವೃದ್ಧಿ ಕಾರ್ಯಗಳ ಸಂಪೂರ್ಣ ಮಾಹಿತಿಯನ್ನು ಪುಸ್ತಕ ಒಳಗೊಂಡಿದೆ.