ಕಲಬುರಗಿ: ಕಲ್ಯಾಣ ಕರ್ನಾಟಕ ಅಭಿವೃದ್ದಿ ನಿಗಮದ ವತಿಯಿಂದ ಅರಣ್ಯ ಇಲಾಖೆಗೆ ರೂ 30 ಕೋಟಿ ಅನುದಾನ ಬಿಡುಗಡೆ ಮಾಡಲಾಗುತ್ತಿದ್ದು. ಅರಣ್ಯ ಹಾಗೂ ವನ್ಯಜೀವಿಗಳ ಸಂರಕ್ಷಣೆಗೆ ಈ ಅನುದಾನ ಬಳಸಿಕೊಳ್ಳಬೇಕು. ಇದಲ್ಲದೇ ಇನ್ನೂ ಬೇಕಾಗುವ ಅನುದಾನ ಬಿಡುಗಡೆ ಮಾಡಲು ಅರಣ್ಯ ಸಚಿವರಿಗೆ ಮನವಿ ಸಲ್ಲಿಸಿ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಹೇಳಿದರು.
India’s richest person: ಮುಖೇಶ್ ಅಂಬಾನಿಯನ್ನು ಹಿಂದಿಕ್ಕಿ ಭಾರತದ ಶ್ರೀಮಂತ ವ್ಯಕ್ತಿಯಾದ ಗೌತಮ್ ಅದಾನಿ
ಪ್ರಕೃತಿಯ ಆಸ್ತಿಯನ್ನು ಕಾಪಾಡುವ ಅರಣ್ಯ ಸಿಬ್ಬಂದಿಗಳ ಕಾರ್ಯಕ್ಷಮತೆ ದೇಶದ ಗಡಿ ಕಾಯುವ ಸೈನಿಕರ ಸೇವೆಗೆ ಸಮಾನವಾದುದು ಎಂದು ಶ್ಲಾಘಿಸಿದ ಸಚಿವರು ನೈಸರ್ಗಿಕ ವಿಕೋಪ, ವನ್ಯ ಜೀವಿಗಳ ನಡುವಿನ ಸಂಘರ್ಷ, ಅರಣ್ಯ ಚೋರರ ವಿರುದ್ದದ ಕಾರ್ಯಾಚರಣೆ ಸೇರಿದಂತೆ ಹಲವಾರು ಅಡೆತಡೆಗಳ ನಡುವೆ ಕೆಲಸ ಮಾಡುವ ನಿಮ್ಮ ಸೇವೆಯನ್ನು ಸರಿಯಾಗಿ ಅರ್ಥ ಮಾಡಿಕೊಳ್ಳಬೇಕಿದೆ. ನಾವು ವನ್ಯಜೀವಿಗಳ ಬಗ್ಗೆ ತೋರಿಸುವ ಕಾಳಜಿ ಅರಣ್ಯ ಸಿಬ್ಬಂದಿಗಳಿಗೂ ತೋರಿಸಬೇಕಿದೆ ಎಂದು ಕಾಳಜಿ ವ್ಯಕ್ತಪಡಿಸಿದರು.