ಕೋಲಾರ:- ಮಾಜಿ ಸ್ಪೀಕರ್ ರಮೇಶ್ ಕುಮಾರ್ಗೆ ಮತ್ತೆ ಭೂಸಂಕಷ್ಟ ಎದುರಾಗಿದ್ದು, ಜ. 15 ರೊಳಗೆ ಸರ್ವೆ ಮುಗಿಸಲು ಹೈಕೋರ್ಟ್ ಆದೇಶ ಹೊರಡಿಸಿದೆ.
ಮೊಟ್ಟೆಯ ದರ ಹೆಚ್ಚಳ: ಹೆಚ್ಚುವರಿ ಹಣ ಕೊಡಲು ಸರ್ಕಾರ ಹಿಂದೇಟು, ಶಿಕ್ಷಕರು ಕಂಗಾಲು!
ಅರಣ್ಯ ಭೂಮಿ ಒತ್ತುವರಿ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರ ರಕ್ಷಣೆಗೆ ತೆರೆಮರೆ ಪ್ರಯತ್ನ ಮಾಡುತ್ತಿದ್ದ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಚಾಟಿ ಬೀಸಿದೆ.
ಮಾಜಿ ಸ್ಪೀಕರ್ ರಮೇಶ್ ಕುಮಾರ್ ಕಾಂಗ್ರೆಸ್ನ ಪ್ರಭಾವಿ ಮುಖಂಡ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೂ ಅತ್ಯಾಪ್ತರು. ಹೀಗೆ ಸಾಕಷ್ಟು ಪ್ರಭಾವ ಹೊಂದಿರುವ ರಮೇಶ್ ಕುಮಾರ್ ಅವರ ವಿರುದ್ಧ ಅರಣ್ಯ ಭೂಮಿ ಒತ್ತುವರಿ ಆರೋಪವಿದೆ
ಕಳೆದ ಎರಡು ದಶಕಗಳಿಂದ ನ್ಯಾಯಾಲಯದಲ್ಲಿ ಈ ಪ್ರಕರಣದ ಬಗ್ಗೆ ವಾದ, ಪ್ರತಿವಾದಗಳು ನಡೆಯುತ್ತಲೇ ಇವೆ. ಅರಣ್ಯ ಹಾಗೂ ಕಂದಾಯ ಇಲಾಖೆಗೆ ಜಂಟಿ ಸರ್ವೆ ಮಾಡಿ ಒತ್ತುವರಿಯಾಗಿದ್ದಲ್ಲಿ ತೆರವು ಮಾಡಿ ಎಂದು ಹೈಕೋರ್ಟ್ ಸೂಚನೆ ನೀಡಿತ್ತು. ಆದರೆ ರಾಜ್ಯ ಕಾಂಗ್ರೆಸ್ ಸರ್ಕಾರ ಒಂದಿಲ್ಲೊಂದು ಕಾರಣ ನೀಡಿ ಮೂರು ಬಾರಿ ಜಂಟಿ ಸರ್ವೆ ಕಾರ್ಯ ಮುಂದೂಡಿತ್ತು. ಆದ್ರೀಗ ಹೈಕೋರ್ಟ್ ಜನವರಿ 15ರೊಳಗೆ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸರ್ವೆ ಕಾರ್ಯ ಮುಗಿಸಿ ಜನವರಿ 30 ರೊಳಗೆ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದೆ.