ಬೆಂಗಳೂರು:- ರಾಜ್ಯದ ಅರಣ್ಯ ಸಿಬ್ಬಂದಿಗೂ ಪೊಲೀಸ್ ಕ್ಯಾಂಟೀನ್ ಸೌಲಭ್ಯ ನೀಡಬೇಕು ಸಚಿವ ಈಶ್ವರ ಖಂಡ್ರೆ ಅವರು ಸಿದ್ದರಾಮಯ್ಯಗೆ ಮನವಿ ಮಾಡಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು, ರಾಜ್ಯದ ಸಮೃದ್ಧ ಅರಣ್ಯ ಸಂಪತ್ತಿನ ರಕ್ಷಣೆಗೆ ಹಗಲಿರುಳು ಶ್ರಮಿಸುವ ಅರಣ್ಯ ಸಿಬ್ಬಂದಿಗೂ ಪೊಲೀಸ್ ಕ್ಯಾಂಟೀನ್ ಸೌಲಭ್ಯ ನೀಡಬೇಕು. ಕಾಡ್ಗಿಚ್ಚು ನಂದಿಸುವಾಗ, ಮಾನವ-ವನ್ಯಜೀವಿ ಸಂಘರ್ಷ ತಡೆಯುವ ಸಂದರ್ಭದಲ್ಲಿ ಜೀವವನ್ನು ಒತ್ತೆಯಿಟ್ಟಿದ್ದಾರೆ. ಒತ್ತುವರಿದಾರರು ಮತ್ತು ಕಾಡುಗಳ್ಳರ ಆಕ್ರೋಶಕ್ಕೆ ಗುರಿಯಾಗಿ ಈವರೆಗೆ 61 ಅರಣ್ಯ ಸಿಬ್ಬಂದಿ ಮತ್ತು ಅಧಿಕಾರಿಗಳು ಹುತಾತ್ಮರಾಗಿದ್ದಾರೆ. ಈ ಎಲ್ಲರ ಕುಟುಂಬದೊಂದಿಗೆ ಅರಣ್ಯ ಇಲಾಖೆ ನಿಂತಿದೆ ಎಂದರು.
ದೇಶವನ್ನು ಅಂತರ್ಯುದ್ಧದತ್ತ ತಳ್ಳುವುದು ರಾಹುಲ್ ಗಾಂಧಿ ಏಕೈಕ ಗುರಿ: ಸಿಎಂ ಯೋಗಿ ಆದಿತ್ಯನಾಥ್!
ರಾಜ್ಯದ ಸಮೃದ್ಧ ಅರಣ್ಯ ಸಂಪತ್ತಿನ ರಕ್ಷಣೆಗೆ ಹಗಲಿರುಳು, ಜೀವದ ಹಂಗು ತೊರೆದು ಶ್ರಮಿಸುವ ಅರಣ್ಯ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಹಾಲಿ ಇರುವ ಪೊಲೀಸ್ ಕ್ಯಾಂಟೀನ್ ಸೌಲಭ್ಯ ಬಳಸಿಕೊಳ್ಳಲು ಅವಕಾಶ ನೀಡಬೇಕು ಎಂದು ಮನವಿ ಮಾಡಿದ್ದಾರೆ.
ಇದಕ್ಕೂ ಮುನ್ನ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಗಳಾಗಿದ್ದಾಗ ಹುತಾತ್ಮರ ಕುಟುಂಬಕ್ಕೆ ಪರಿಹಾರ ನೀಡುವ ಘೋಷಣೆ ಮಾಡಿದರು. 30 ಲಕ್ಷ ರೂ. ಇದ್ದ ಪರಿಹಾರದ ಮೊತ್ತವನ್ನು ಈಗ 50 ಲಕ್ಷ ರೂ.ಗೆ ಹೆಚ್ಚಿಸುವ ಕಾರ್ಯವನ್ನೂ ಅವರೇ ಮಾಡಿದ್ದಾರೆ. ನಮ್ಮ ಸರ್ಕಾರ ಅರಣ್ಯದಲ್ಲಿ ಜೀವದ ಹಂಗು ತೊರೆದು ಆನೆ ಕಾರ್ಯಪಡೆ, ಕಳ್ಳಬೇಟಿ ನಿಗ್ರಹ ಶಿಬಿರ ಮತ್ತು ಇತರ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಹೊರಗುತ್ತಿಗೆ ನೌಕರರಿಗೂ ಮಾಸಿಕ 2 ಸಾವಿರ ರೂ. ಕಷ್ಟ ಕಾರ್ಯ ಭತ್ಯೆ ನೀಡುವ ಘೋಷಣೆ ಮಾಡಿದ್ದು, ಇದನ್ನು ಅನುಷ್ಠಾನ ಮಾಡಲಾಗಿದೆ ಎಂದು ತಿಳಿಸಿದರು.
ಕಳೆದ 16 ತಿಂಗಳ ಅವಧಿಯಲ್ಲಿ ಅರಣ್ಯ ಇಲಾಖೆ ಸುಮಾರು 10 ಸಾವಿರ ಎಕರೆ ಭೂಮಿಯನ್ನು ಅಧಿಸೂಚಿತ ಅರಣ್ಯ ಎಂದು ಘೋಷಿಸಿದೆ. ಜೊತೆಗೆ ಬೆಂಗಳೂರು, ಕೋಲಾರ, ಬೀದರ್ ಸೇರಿದಂತೆ ರಾಜ್ಯದ ವಿವಿಧೆಡೆ ಸಾವಿರಾರು ಕೋಟಿ ರೂ. ಬೆಲೆ ಬಾಳುವ 2500 ಎಕರೆಗೂ ಹೆಚ್ಚು ಅರಣ್ಯ ಭೂಮಿಯನ್ನು ಮರು ವಶಕ್ಕೆ ಪಡೆದಿದೆ ಎಂದರು.