ಬೆಳಗಾವಿ: ವಿಧಾನಮಂಡಲ ಅಧಿವೇಶನದಲ್ಲಿ ಬಿಜೆಪಿ ಭಿನ್ನಮತ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಸ್ವಪಕ್ಷೀಯರಿಗೆ ಕಿವಿಮಾತು ಹೇಳಿದ್ದಾರೆ. ಆಂತರಿಕ ಭಿನ್ನಾಭಿಪ್ರಾಯ ಮರೆತು ಒಗ್ಗಟ್ಟಿನಿಂದ ಸದನದಲ್ಲಿ ಹೋರಾಟ ನಡೆಸಿ ಎಂದು ಸೂಚನೆ ನೀಡಿದ್ದಾರೆ. ಬೆಳಗಾವಿ ಅಧಿವೇಶನದಲ್ಲಿ ಸದನದಲ್ಲೇ ಬಿಜೆಪಿ ಭಿನ್ನಮತ ಬಹಿರಂಗವಾಗಿತ್ತು. ಬಸನಗೌಡ ಪಾಟೀಲ್ ಯತ್ನಾಳ್,
ಬಿ.ವೈ ವಿಜಯೇಂದ್ರ ಹಾಗೂ ಆರ್. ಅಶೋಕ್ ನಡುವಿನ ಭಿನ್ನಾಭಿಪ್ರಾಯ ಬಹಿರಂಗವಾಗಿ ಗೋಚರಿಸುತ್ತಿತ್ತು. ಇದರ ಪರಿಣಾಮವಾಗಿ ಬೆಳಗಾವಿ ಅಧಿವೇಶನದಲ್ಲಿ ಆಡಳಿತ ಪಕ್ಷದ ವಿರುದ್ಧ ರಚನಾತ್ಮಕ ಹೋರಾಟ ರೂಪಿಸುವಲ್ಲಿ ಬಿಜೆಪಿ ವಿಫಲವಾಗಿತ್ತು. ಈ ಹಿನ್ನೆಲೆಯಲ್ಲಿ ಮಂಗಳವಾರ ರಾತ್ರಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಈ ವಿಚಾರವಾಗಿ ಚರ್ಚೆ ನಡೆದಿದೆ.
https://ainlivenews.com/see-how-hot-and-hot-this-cold-can-be/
ಸಭೆಯಲ್ಲಿ ಭಾಗಿಯಾಗಿದ್ದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಪಕ್ಷದ ನಾಯಕರು ಹಾಗೂ ಶಾಸಕರಿಗೆ ಕೆಲವೊಂದು ಸಲಹೆ ಸೂಚನೆಗಳನ್ನು ನೀಡಿದ್ದಾರೆ. ಆಂತರಿಕ ಅಸಮಾಧಾನ ಬಿಟ್ಟು ಒಗ್ಗಟ್ಟಿನಿಂದ ಸದನದಲ್ಲಿ ಇರುವಂತೆ ಸೂಚಿಸಿದ್ದಾರೆ. ನಾನು ಚುನಾವಣಾ ನಿವೃತ್ತಿ ಅಷ್ಟೇ ಅಗಿರೋದು ಹೋರಾಟದಿಂದಲ್ಲ. ರಾಜ್ಯದ ಯಾವುದೇ ಮೂಲೆಗೆ ಕರೆದರೂ ನಾನು ಬರುತ್ತೇನೆ. ನನಗೆ ಪಕ್ಷ ಸಂಘಟನೆ ಮುಖ್ಯ ಪಕ್ಷ ಮುಖ್ಯ. ಎಲ್ಲರು ಒಟ್ಟಾಗಿ ಸರ್ಕಾರದ ವಿರುದ್ದ ಹೋರಾಡೋಣ ಎಂದು ಮನವಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.