ಮುಂಬೈ: ಜೀವಂತವಾಗಿರಲು ಬಯಸಿದರೆ ದೇವಸ್ಥಾನದಲ್ಲಿ ಕ್ಷಮೆಯಾಚಿಸಿ ಇಲ್ಲವೇ 5 ಕೋಟಿ ಹಣ ಕೊಡಿ ಎಂದು ಬಾಲಿವುಡ್ ನಟ ಸಲ್ಮಾನ್ ಖಾನ್ಗೆ ಮತ್ತೆ ಬಿಷ್ಣೋಯ್ ಗ್ಯಾಂಗ್ನಿಂದ ಬೆದರಿಕೆ ಬಂದಿದೆ. ಈ ಸಂಬಂಧ ಮುಂಬೈ ಪೊಲೀಸರಿಗೆ ವಾಟ್ಸಪ್ ಸಂದೇಶ ಬಂದಿದೆ. ಒಂದು ವಾರದಲ್ಲಿ ಸಲ್ಮಾನ್ ಖಾನ್ಗೆ ಬಂದ ಎರಡನೇ ಕೊಲೆ ಬೆದರಿಕೆ ಇದಾಗಿದೆ.
ಮುಂಬೈ ಪೊಲೀಸ್ ಟ್ರಾಫಿಕ್ ಕಂಟ್ರೋಲ್ ರೂಂಗೆ ದರೋಡೆಕೋರ ಲಾರೆನ್ಸ್ ಬಿಷ್ಣೋಯ್ ಹೆಸರಿನಲ್ಲಿ ಬೆದರಿಕೆ ಸಂದೇಶ ಬಂದಿದೆ. ಟ್ರಾಫಿಕ್ ಕಂಟ್ರೋಲ್ ರೂಮ್ಗೆ ಕಳುಹಿಸಲಾದ ಸಂದೇಶದಲ್ಲಿ ಲಾರೆನ್ಸ್ ಬಿಷ್ಣೋಯ್ ಅವರ ಸಹೋದರ ಮಾತನಾಡಿದ್ದಾರೆ ಎನ್ನಲಾಗಿದೆ. ‘ಸಲ್ಮಾನ್ ಖಾನ್ ಬದುಕಬೇಕಾದರೆ, ಅವರು ನಮ್ಮ ದೇವಸ್ಥಾನಕ್ಕೆ ಹೋಗಿ ಕ್ಷಮೆಯಾಚಿಸಬೇಕು.
Dolo 650: ಸಣ್ಣ-ಪುಟ್ಟ ರೋಗಕ್ಕೆಲ್ಲಾ “ಡೋಲೋ 650” ಮಾತ್ರೆ ನುಂಗುವ ಮುನ್ನ ಎಚ್ಚರ! ಈ ಸ್ಟೋರಿ ನೋಡಿ
ಇಲ್ಲವೇ 5 ಕೋಟಿ ರೂ. ನೀಡಬೇಕು. ಹಾಗೆ ಮಾಡದಿದ್ದರೆ ನಾವು ಅವನನ್ನು ಕೊಲ್ಲುತ್ತೇವೆ. ನಮ್ಮ ಗ್ಯಾಂಗ್ ಸಕ್ರಿಯವಾಗಿದೆ’ ಎಂದು ಬೆದರಿಕೆ ಹಾಕಿದ್ದಾರೆ. ಕಳೆದ ವಾರ, ಅ.30 ರಂದು ಮುಂಬೈ ಸಂಚಾರ ನಿಯಂತ್ರಣವು ಸಲ್ಮಾನ್ ಖಾನ್ ವಿರುದ್ಧ ಇದೇ ರೀತಿಯ ಬೆದರಿಕೆಯನ್ನು ಸ್ವೀಕರಿಸಿತ್ತು. 2 ಕೋಟಿಗೆ ಬೇಡಿಕೆಯಿತ್ತು. ಬಾಂದ್ರಾ ಪೂರ್ವದ ನಿವಾಸಿ ಅಜಮ್ ಮೊಹಮ್ಮದ್ ಮುಸ್ತಫಾ ಎಂಬಾತನನ್ನು ತಕ್ಷಣವೇ ಬಂಧಿಸಲಾಯಿತು.